ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂಬಂಧ, ಸಂಘಟನೆಗಳು ಬೂತ್ ಮಟ್ಟದ ಅಧಿಕಾರಿಗಳ ಮೇಲೆ ಅತಿಯಾದ ಒತ್ತಡ ಹೇರುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆಗೆ ಮುಂದಾಗಿವೆ.
ಬೂತ್ ಮಟ್ಟದ ಅಧಿಕಾರಿಗಳ ಸಂಘಟನೆಯಾದ ಬಿಎಲ್‌ಒ ಅಧಿಕಾರ ರಕ್ಷಾ ಸಮಿತಿಯ ಸದಸ್ಯರು ಸಮಸ್ಯೆಗಳ ಕುರಿತು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಕಾರ್ಮಿಕ ಸಂಹಿತೆಗಳ ಜಾರಿಗೆ ವಿರೋಧ, ಅಧಿಸೂಚನೆ ದಹಿಸಿ ಸಿಐಟಿಯು ಪ್ರತಿಭಟನೆ
ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭವಾದಾಗಿನಿಂದ ಜಿಲ್ಲೆಗಳಾದ್ಯಂತ ಬಿಎಲ್‌ಒಗಳು ತುಂಬಾ ಒತ್ತಡದಲ್ಲಿ ಹಾಗೂ ಅಮಾನವೀಯ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಸಮಿತಿ ಆರೋಪಿಸಿದೆ.
ಚುನಾವಣಾ ಆಯೋಗವು ತಕ್ಷಣ ಮಧ್ಯಪ್ರವೇಶಿಸಿ, ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ, ಉತ್ತರ ಕೋಲ್ಕತ್ತದ ಕಾಲೇಜು ಚೌಕದಿಂದ ನಗರದ ಮಧ್ಯ ಭಾಗದಲ್ಲಿರುವ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿಯವರೆಗೆ ಮೆರವಣಿಗೆ ನಡೆಸುವುದಾಗಿ ಸಮಿತಿ ತಿಳಿಸಿದೆ.
ವಿವಿಧ ಸಂಘಟನೆಗಳ ಅರೆ-ಶಿಕ್ಷಕರು, ಕಾಲೇಜು ಪ್ರಾಧ್ಯಾಪಕರು ಮತ್ತು ಶಿಕ್ಷಕರು ತಮ್ಮ ಬೇಡಿಕೆಗಳನ್ನು ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ನೋಡಿ: ದಿನಪೂರ್ತಿ ಕೆಲಸ ಕಮ್ಮಿ ವೇತನ : ಅಂಗನವಾಡಿ, ಬಿಸಿಯೂಟದವರ ಬದುಕಿನ ಕಥೆ Janashakthi Media
