ಬೆಂಗಳೂರು: ಕಳೆದ ವಾರ ಒಂದರ ಮೇಲೊಂದರಂತೆ ಬಹುಮಡಿ ಕಟ್ಟಡಗಳು ಕುಸಿದು ಬೆಂಗಳೂರಿನಲ್ಲಿ ಅವಘಡ ಸಂಭವಿಸಿತ್ತು. ಇದರ ಬೆನ್ನಲ್ಲೇ ಇದೀಗ ಮೆಟ್ರೊ ಕಾಮಗಾರಿಯ ವೇಳೆ ದುರಂತ ಸಂಭಿಸಿದೆ. ಟ್ಯಾನರಿ ರಸ್ತೆಯಲ್ಲಿ ಸುಮಾರು 30 ಅಡಿ ಮಣ್ಣು ಕುಸಿದು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಸ್ಥಳದಲ್ಲಿ ಯಾರೂ ಇಲ್ಲದ್ದರಿಂದ ಭಾರೀ ಅನಾಹುತ ತಪ್ಪಿದೆ.
ಇದನ್ನೂ ಓದಿ : ಮೆಟ್ರೋ ಸುರಂಗ ಕೊರೆದು 13 ತಿಂಗಳ ನಂತರ ಹೊರಬಂದ ಊರ್ಜಾ ಯಂತ್ರ
ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಕೆಲ ದಿನಗಳ ಹಿಂದೆ ಇಲ್ಲಿ ಸುರಂಗ ಕೊರೆಯಲಾಗಿತ್ತು. ಇದಾದ ಬಳಿಕ ಒತ್ತಡದಿಂದಾಗಿ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಈ ಜಾಗವು ಝುಬಿ ಎಂಬುವವರಿಗೆ ಸೇರಿದೆ. ಇಲ್ಲಿ ಮೊದಲು ಬಾವಿ ಇತ್ತು. ಅದನ್ನು ಅರು ಮುಚ್ಚಿದ್ದರು, ಈ ಸ್ಥಳದಲ್ಲಿ ಕಾಮಗಾರಿ ನಡೆಯುತ್ತಿದೆ. ಈ ಜಾಗದಲ್ಲಿ ಮಣ್ಣು ಕುಸಿದಿರುವುದಾಗಿ ತಿಳಿದುಬಂದಿದೆ.
ಘಟನೆ ಸಂಭವಿಸಲು ಬಿಎಂಆರ್‌ಸಿಎಲ್ ಅಧಿಕಾರಿಗಳೇ ಕಾರಣ. ಹೀಗಾಗಿ ನಮ್ಮ ಮೆಟ್ರೋ ಈ ಜಾಗ ಪಡೆದು ಇದಕ್ಕೆ ಪರಿಹಾರ ನೀಡಲಿ ಎಂದು ಮಾಲೀಕರು ಆಗ್ರಹಿಸಿದ್ದಾರೆ. ಮಣ್ಣು ಕುಸಿತದಿಂದಾಗಿ ಸಮೀಪದಲ್ಲಿ ವಾಸಿಸುತ್ತಿರುವ ತಮ್ಮ ಮನೆಗೆ ಕುಸಿತದ ಭೀತಿ ಎದುರಾಗಿದೆ. ಹೀಗಾಗಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಈ ಜಾಗವನ್ನು ತಮ್ಮ ವಶಕ್ಕೆ ಪಡೆದು ಪರಿಹಾರವನ್ನು ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.