ಸೋಮುವಾರದಿಂದ ಬಿಎಂಟಿಸಿ ಬಸ್ ಸಂಚಾರಕ್ಕೆ ಬಿಬಿಎಂಪಿ ಒಪ್ಪಿಗೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಇಳಿಕೆ ಕಾಣುತ್ತಿದೆ. ಹೀಗಾಗಿ ಜೂನ್ 14ರಿಂದ ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಮೊದಲನೇ ಹಂತದ ಅನ್ಲಾಕ್ ಜಾರಿಗೊಳಿಸಿ, ಕೆಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಲಾಗಿದೆ. ಜೂನ್ 21ರಿಂದ 2ನೇ ಹಂತದ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಆಗ ಇನ್ನೂ ಹೆಚ್ಚಿನ ವಿನಾಯಿತಿ ನೀಡಲು ಸರ್ಕಾರ ಪ್ಲಾನ್ ರೂಪಿಸಿದೆ. ಲಾಕ್​ಡೌನ್​ ಕಾರಣದಿಂದ ಸಂಚಾರ ಸ್ಥಗಿತಗೊಳಿಸಿದ್ದ ಬಿಎಂಟಿಸಿ ಬಸ್​ಗಳು ಜೂನ್ 21ರಿಂದ ಕಾರ್ಯಾಚರಣೆ ಆರಂಭಿಸಲು ಸಿದ್ದತೆ ನಡೆಸಿವೆ.
ಜೂನ್ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗಳು ಸಂಚಾರ ಆರಂಭಿಸಲಿವೆ. ಸದ್ಯ ರಾಜ್ಯ ರಾಜಧಾನಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಜೊತೆಗೆ ಮೊದಲ ಹಂತದ ಅನ್ಲಾಕ್ ಕೂಡ ಮಾಡಲಾಗಿದೆ.

ಇದೇ ಸೋಮವಾರದಿಂದ ಎರಡನೇ ಹಂತದ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಅಂದಿನಿಂದ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಲು ಬಿಬಿಎಂಪಿ ನಿರ್ಧಾರ ಮಾಡಿದೆ.

ಮೊದಲ ಹಂತದ ಲಾಕ್​ಡೌನ್​​ ಸಡಿಲಿಕೆ ವೇಳೆ ಬಿಬಿಎಂಪಿ ಸಾರ್ವಜನಿಕ ಸಾರಿಗೆಗೆ ವಿನಾಯಿತಿ ಬೇಡ ಎಂದಿತ್ತು. ಸಾರ್ವಜನಿಕ ಸಾರಿಗೆಗೆ ಅವಕಾಶ ನೀಡಿದ್ರೆ ಸೋಂಕು ಹೆಚ್ಚಳವಾಗಲಿದೆ. ಹೀಗಾಗಿ ಸದ್ಯಕ್ಕೆ ಬಸ್ ಸಂಚಾರಕ್ಕೆ ಅನುಮತಿ ಬೇಡ ಎಂದು ಪಾಲಿಕೆ ಸರ್ಕಾರಕ್ಕೆ ಮನವಿ ಮಾಡಿತ್ತು.ನಗರದಲ್ಲಿ ಬಿಎಂಟಿಸಿ ಬಸ್ಗಳು ರಸ್ತೆಗಿಳಿಸಲು ಜನಪ್ರತಿನಿಧಿಗಳು, ಸಾರ್ವಜನಿಕರಿಂದ ಒತ್ತಡ ಕೇಳಿ ಬಂದಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡುವಂತೆ ಬಿಬಿಎಂಪಿ ಮೇಲೆ ಒತ್ತಡ ಇತ್ತು. ಸದ್ಯ ಒತ್ತಡಕ್ಕೆ ಮಣಿದಿರುವ ಬಿಬಿಎಂಪಿ ಬಸ್ ಸಂಚಾರ ಮರು ಪ್ರಾರಂಭಿಸುವ ನಿರ್ಧಾರ ತೆಗೆದುಕೊಂಡಿದೆ.

ಸೋಮವಾರದಿಂದ ನಗರದಲ್ಲಿ ಬಸ್ ಸಂಚಾರಕ್ಕೆ ಅನುಮತಿ ನೀಡಲು ನಿರ್ಧಾರ ಮಾಡಿದೆ. ಬಸ್​ಗಳ ಅನುಮತಿ ನೀಡಿದ್ರೆ ಏನೆಲ್ಲಾ ಷರತ್ತುಗಳನ್ನ ವಿಧಿಸಬೇಕು ಎಂಬ ಬಗ್ಗೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆದಿದೆ. ಅಧಿಕಾರಿಗಳ ಅಭಿಪ್ರಾಯ ಪಡೆದು ಷರತ್ತುಬದ್ಧ ಅನುಮತಿ ನೀಡಲು ಬಿಬಿಎಂಪಿ ಒಪ್ಪಿಗೆ ಕೊಟ್ಟಿದೆ.

ಬಸ್​​ ಓಡಾಟಕ್ಕೆ ಏನೆಲ್ಲಾ ಷರತ್ತು..?

ಶೇಕಡಾ 50ರಷ್ಟು ಬಸ್ಸುಗಳನ್ನ ಮಾತ್ರ ರಸ್ತೆಗಿಳಿಸಲು ಅನುಮತಿ

ಬಸ್ಸುಗಳಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗಷ್ಟೇ ಅವಕಾಶ

ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ

ಒಂದು ಆಸನ ಬಿಟ್ಟು ಒಂದು ಆಸನದಲ್ಲಿ ಕುಳಿತುಕೊಳ್ಳಬೇಕು

ನಿಂತುಕೊಂಡು ಪ್ರಯಾಣಿಸೋದಕ್ಕೆ ಅವಕಾಶ ಇಲ್ಲ

ಬಸ್ ನಿಲ್ದಾಣಗಳಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳಬೇಕು

ಮೆಜೆಸ್ಟಿಕ್, ಟರ್ಮಿನಲ್ಸ್, ಪ್ರಮುಖ ಬಸ್ ನಿಲ್ದಾಣಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ

ನೈಟ್ ಕರ್ಫ್ಯೂ ಆರಂಭಕ್ಕೂ ಮುನ್ನ 7 ಗಂಟೆ ಒಳಗೆ ಬಸ್ ಸಂಚಾರ ನಿಲ್ಲಿಸಬೇಕು ಎಂದು ಷರತ್ತುಗಳನ್ನು ಬಿಬಿಎಂಪಿ ನೀಡಿದೆ.

Donate Janashakthi Media

Leave a Reply

Your email address will not be published. Required fields are marked *