ಸಾರಿಗೆ ನೌಕರರ ಮುಷ್ಕರ :‌ ಖಾಸಗಿ ಬಸ್‌ ಓಡಿಸಲು ಸಿದ್ಧತೆ – ಸವದಿ

ಕಲಬುರಗಿ : ಸಾರಿಗೆ ನೌಕರರ ಪ್ರಮುಖ 9 ಬೇಡಿಕೆಗಳ ಪೈಕಿ ಎಂಟು ಬೇಡಿಕೆಯನ್ನು ಈಡೇರಿಸಿದ್ದವೆ, ಇನ್ನೂ ಒಂದು ಬಾಕಿ ಇರುವ ವೇತನ ಹೆಚ್ಚಳವನ್ನೂ ಸಹ ಮೇ 4ರ ನಂತರ ಈಡೇರಿಕೆಗೆ ಮನವರಿಕೆ ಮಾಡಿ ಕೊಡಲಾಗಿದೆ ಎಂದು ಸಾರಿಗೆ ಸಚಿವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಏ.1 ರಿಂದಲೇ ಸಾರಿಗೆ ನೌಕರರು ಬೇಡಿಕೆಗಳ ಈಡೇರಿಕೆಗಾಗಿ ವಾರಪೂರ್ತಿ ವಿನೂತನ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳ ಬಗ್ಗೆ ನನಗೆ ಗೌರರವವಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.  ಈ ಕುರಿತು ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಇದನ್ನು ಓದಿ : ಬೇಡಿಕೆ ಈಡೇರಿಕೆಗಾಗಿ ವಾರಪೂರ್ತಿ ಸಾರಿಗೆ ನೌಕರರ ವಿನೂತನ ಪ್ರತಿಭಟನೆ

ಈಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬೇಡಿಕೆ ಈಡೇರಿಸಲಿಕ್ಕಾಗುತ್ತಿಲ್ಲ. ಹೀಗಾಗಿ ಚುನಾವಣಾ ಫಲಿತಾಂಶ ನಂತರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕೋರೊನಾ ಸಾಂಕ್ರಾಮಿಕ ರೋಗ ಸಂರ್ಭದಲ್ಲಿ ಬಡವರಿಗೆ ಮಧ್ಯಮ ವರ್ಗದವರಿಗೆ ಶಾಲಾ ಮಕ್ಕಳಿಗೆ ಸಾಕಷ್ಟು ತೊಂದರೆ ಆಗುತ್ತದೆ, ಇದನ್ನು ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಬೇಕೆಂದರು. ಕೋಡಿಹಳ್ಳಿ ಚಂದ್ರಶೇಖರ್ ಮೇಧಾವಿ, ಬಹಳ ಬುದ್ದಿವಂತರು. ಅವರ ಬುದ್ದಿ ನಮ್ಮ ಸರ್ಕಾರಕ್ಕೆ ಇಲ್ಲಾ ಅಂತಾ ಅಂದುಕೊಳ್ಳತ್ತೇನೆ. ಅನಾವಶ್ಯಕವಾಗಿ ಸರ್ಕಾರ ಮತ್ತು ನೌಕರರ ಮಧ್ಯೆ ಗೊಂದಲ ಸೃಷ್ಟಿ ಮಾಡುವುದಕ್ಕೆ ಮುಂದಾಗಿದ್ದಾರೆ ಎಂದು ಕೋಡಿಹಳ್ಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ :ಸಾರಿಗೆ ನೌಕರರ ಮುಷ್ಕರ ಇಂದು ಅಂತ್ಯ?

ಒಂದು ವೇಳೆ ಬಸ್ ಸಂಚಾರ ಬಂದ್ ಮಾಡಿದರೆ ಅನಿವಾರ್ಯವಾಗಿ ಖಾಸಗಿ ವಾಹನಗಳನ್ನ ತಂದು ಓಡಿಸಲು ನಿರ್ಧರಿಸಲಾಗಿದೆ. ಈ ಕುರಿತು ಇಂದು ಮುಖ್ಯಮಂತ್ರಿಯವರು ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಸಚಿವ ಸವದಿ ಸ್ಪಷ್ಟಪಡಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *