ನವದೆಹಲಿ : ರಾಜ್ಯದ 5, 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘಗಳಿಂದ ಅರ್ಜಿ ಸಲ್ಲಿಸಲಾಗಿದ್ದು, 5.8 ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ.
ಈ ಆದೇಶವನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳು ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿವೆ.
5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಷರತ್ತುಬದ್ಧ ಅನುಮತಿ ನೀಡಿದ್ದ ಹೈಕೋರ್ಟ್‍ನ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ. ಪ್ರಕರಣವನ್ನು ತುರ್ತು ವಿಚಾರಣೆ ನಡೆಸುವಂತೆ ಸಂಘದ ಪರ ವಕೀಲರು ಮನವಿ ಮಾಡಿದ್ದಾರೆ.
ಸೋಮವಾರ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಪೀಠದ ಮುಂದೆ ಪ್ರಸ್ತಾಪಿಸಿದ ವಕೀಲರು, ರಾಜ್ಯಮಟ್ಟದ ಬೋರ್ಡ್ ಪರೀಕ್ಷೆಗಳನ್ನು ನಡೆಸುವುದರಿಂದ ಮೌಲ್ಯಮಾಪನ ವಿಧಾನವು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರವು ಪೋಷಕರ ಮತ್ತು ಶಾಲೆಗಳ ಜೊತೆಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ವಾದಿಸಿದರು.
ಇದನ್ನೂ ಓದಿ : ಪಿಯು ಮದ್ಯ ವಾರ್ಷಿಕ ಪರೀಕ್ಷೆಯನ್ನು ಬೋರ್ಡ್ ಪರೀಕ್ಷೆಯಾಗಿ ಪರಿವರ್ತನೆ: ಎಐಡಿಎಸ್‌ಒ ಖಂಡನೆ
ವಾದ ಆಲಿಸಿದ ಸಿಜೆಐ ಡಿ.ವೈ ಚಂದ್ರಚೂಡ್ ಮಾ.27ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದಾಗ, ಈ ವೇಳೆ ಮಧ್ಯಪ್ರವೇಶಿಸಿದ ವಕೀಲರು ಮಾ. 27ರಂದು ಪರೀಕ್ಷೆಗಳು ಆರಂಭವಾಗಲಿದೆ. ಹೀಗಾಗಿ ಇದಕ್ಕೂ ಮುನ್ನ ವಿಚಾರಣೆ ನಡೆಸಬೇಕು ಎಂದು ಹೇಳಿದರು. ಇದಕ್ಕೆ ಗರಂ ಆದ ಸಿಜೆಐ, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮ ಎಂದು ಹೈಕೋರ್ಟ್‍ಗೆ ಗೊತ್ತಿದೆ ಎಂದರು.
ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮವೆಂದು ಹೈಕೋರ್ಟ್‍ಗೆ ಗೊತ್ತಿದೆ. ನಾವು 4,000 ಶಾಲೆಗಳನ್ನು ಪ್ರತಿನಿಧಿಸುತ್ತೇವೆ. ನಮ್ಮ ವಾದ ಆಲಿಸಬೇಕೆಂದು ಸಿಜಿಐ ಚಂದ್ರಚೂಡ್ ಅವರಿಗೆ ವಕೀಲರು ಮನವಿ ಮಾಡಿದ್ದಾರೆ. ಮತ್ತೊಂದೆಡೆ ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಅಷ್ಟರೊಳಗೆ ಮೇಲ್ಮನವಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿದ್ದಾರೆ. ಆದರೆ ಸಿಜೆಐ ಡಿ.ವೈ.ಚಂದ್ರಚೂಡ್ ವಕೀಲರ ಮನವಿ ತಿರಸ್ಕರಿಸಿ ಮಾರ್ಚ್ 27ರಂದೇ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : 5, 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಒಪ್ಪಿಗೆ
ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿತ್ತು. ಆದರೆ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಷರತ್ತುಗಳೊಂದಿಗೆ ಬೋರ್ಡ್ ಪರೀಕ್ಷೆ ನಡೆಸಲು ವಿಭಾಗೀಯ ಪೀಠ ಆದೇಶಿಸಿತ್ತು. ಈ ಆದೇಶವನ್ನು ಸದ್ಯ ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನೆ ಮಾಡಲಾಗಿದೆ.