ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ವೇಳೆ ಬಾಂಬ್ ದಾಳಿ!

ಕೋಲ್ಕತ್ತಾ: ದುಷ್ಕರ್ಮಿಗಳು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದ ವೇಳೆ ಬಾಂಬ್ ದಾಳಿ ನಡೆಸಿರುವ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಮತದಾನದ ವೇಳೆ ಕೆಲವು ದುಷ್ಕರ್ಮಿಗಳು ಕಚ್ಚಾ ಬಾಂಬ್ ಎಸೆದಿದ್ದಾರೆ. ಬಾಂಬ್ ದಾಳಿಯಿಂದಾಗಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೌಡಾದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಇದನ್ನೂ ಓದಿ: “ಮೊದಲು ರಸ್ತೆ ಕ್ಲಿಯರ್ ಮಾಡಿ!”: ಸಚಿವರಿಗೆ ಮಹಿಳೆ ಕ್ಲಾಸ್

ಜಿಲ್ಲೆಯಲ್ಲಿ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ನಿನ್ನೆ ರಾತ್ರಿ ಶಿವನಗರ ಪ್ರಾಥಮಿಕ ಶಾಲೆಯ ಬಳಿ ಕಚ್ಚಾ ಬಾಂಬ್‌ ದಾಳಿ ನಡೆದಿತ್ತು.

ಘಟನೆಯಲ್ಲಿ ಓರ್ವ ಮಹಿಳೆ ಗಾಯಗೊಂಡಿದ್ದರು. ಸಮೀಪದಲ್ಲಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಸಾಹಿನಾ ಮುಮ್ತಾಜ್ ಖಾನ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆಯ ನಂತರ, ಮುರ್ಷಿದಾಬಾದ್ ಜಿಲ್ಲೆಯಲ್ಲಿ ಎಲ್ಲೆಡೆ ಕಟ್ಟೆಚ್ಚರವಹಿಸಲಾಗಿದ್ದು, ಮತದಾನ ಮುಂದುವರೆದಿದೆ.

ಇದನ್ನೂ ನೋಡಿ: ‘ಡ್ರೋನ್-ಸಂತೆ’ ಯಲ್ಲೊಂದು ದಿನ….. Janashakthi Media

Donate Janashakthi Media

Leave a Reply

Your email address will not be published. Required fields are marked *