ಪ್ರಚೋದನೆಗಳಿಗೆ ಬಲಿಯಾಗದೆ ಜಾಗರೂಕರಾಗಿರಲು,
ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಮನವಿ
ನವದೆಹಲಿ :ರಾಷ್ಟ್ರದ ರಾಜಧಾನಿ ದೆಹಲಿಯ ಹೃದಯ ಭಾಗದಲ್ಲಿ ಭೀಕರ ಬಾಂಬ್ ದಾಳಿ ನಡೆದಿರುವುದನ್ನು ಸಿಪಿಐ(ಎಂ) ಪೊಲಿಟ್ ಬ್ಯುರೊ ಬಲವಾಗಿ ಖಂಡಿಸಿದೆ. ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಅದು ತನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸಿದೆ.
ದೆಹಲಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ವರದಿಗಳು ತಿಳಿಸಿವುದು ಅತ್ಯಂತ ಕಳವಳಕಾರಿ. ಇವನ್ನು ಈಗ ಈ ದಾಳಿಗೆ ಜೋಡಿಸಲಾಗಿದೆ. ಇದರಲ್ಲಿ ಒಂದು ಸಂಘಟಿತ ಜಾಲ ಭಾಗಿಯಾಗಿರುವುದನ್ನು ಇದು ಸೂಚಿಸುತ್ತದೆ ಎಂದಿರುವ ಸಿಪಿಐ(ಎಂ), ಇದನ್ನು ಪತ್ತೆಹಚ್ಚುವುದು ಮತ್ತು ಎಲ್ಲಾ ಅಪರಾಧಿಗಳನ್ನು ನ್ಯಾಯದ ಕಟಕಟೆಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದೆ.
ಎಲ್ಲಾ ವಿಭಾಗಗಳ ಜನರು ಯಾವುದೇ ಪ್ರಚೋದನೆಗಳಿಗೆ ಬಲಿಯಾಗದೆ ಜಾಗರೂಕರಾಗಿರಬೇಕು, ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಿಪಿಐ(ಎಂ) ಮನವಿ ಮಾಡಿದೆ.
