ಕೋಲ್ಕತಾ: ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗುವ ಮೊದಲು ಕಚ್ಚಾ ಬಾಂಬ್ ಸ್ಫೋಟಗೊಂಡಿದೆ. ಈ ಸ್ಫೋಟದಲ್ಲಿ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದಕ್ಷಿಣ 24 ಪರಗಣಗಳ ಭಂಗಾರ್‌ನ ಚಲ್ತಾಬೇರಿಯಾದಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿದೆ. ಐವರು ಗಾಯಗೊಂಡಿದ್ದು, ಗಾಯಗೊಂಡ ಒಬ್ಬ ವ್ಯಕ್ತಿ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ನ ಪಂಚಾಯತ್ ಸದಸ್ಯ ಎಂದು ವರದಿಯಾಗಿದೆ. ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ‘ನಾವು ಕಾದು ನೋಡಬೇಕುʼಎಂದು ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದ ಸೋನಿಯಾ ಗಾಂಧಿ
ಪಶ್ಚಿಮ ಬಂಗಾಳ ರಾಜ್ಯ ಲೋಕಸಭೆ ಚುನಾವಣೆ ಮತದಾನದ ಸಂದರ್ಭದಲ್ಲಿಯೂ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಕೆಲವರು ಬಾಂಬ್ ತಯಾರಿಸುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ನೋಡಿ: ಅಮ್ಮ ಎಂಬ ಭಾವಕ್ಕಿರುವ ಕಸುವು ಅನುಭವಿಸಿಯೇ ಅರಿಯಬೇಕು – ಪ್ರತಾಪ್ ಸಿಂಹJanashakthi Media