ಕಾರವಾರ : ಹೊಸ ವರ್ಷಾಚರಣೆ ವೇಳೆ ಭಟ್ಕಳದಲ್ಲಿ ಸ್ಫೋಟ ಮಾಡುವುದಾಗಿ ಪೊಲೀಸ್ ಠಾಣೆಗೆ ಬೆದರಿಕೆ ಪತ್ರ ಬರೆದಿರುವ ವಿಚಾರವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಚೆನ್ನೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹನುಮಂತಪ್ಪ ಬಂಧಿತ ಆರೋಪಿಯಾಗಿದ್ದು, ಚೆನ್ನೈ ಮೂಲದ ಹೊಸಪೇಟೆ ನಿವಾಸಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸ್ಫೋಟ ಮಾಡುವುದಾಗಿ “ನೆಕ್ಸ್ಟ್ ಟಾರ್ಗೆಟ್ ಡಿಸೆಂಬರ್ 25 & ಹ್ಯಾಪಿ ನ್ಯೂ ಇಯರ್ 2023” ಎಂದು ಉರ್ದು ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಬರೆದ ಪೋಸ್ಟ್ ಕಾರ್ಡ್‌ವೊಂದು ಭಟ್ಕಳ ಠಾಣೆಗೆ ತಲುಪಿತ್ತು. ಸೂಕ್ಷ್ಮ ವಿಷಯವಾಗಿದ್ದರಿಂದ ಬಹಿರಂಗಪಡಿಸದೇ ಪೊಲೀಸರು ತನಿಖೆ ನಡೆಸಿದ್ದರು.
ಇದನ್ನೂ ಓದಿ : ಬಿಜೆಪಿ ಗೆಲುವಿಗಾಗಿ ದೇಶಾದ್ಯಂತ ಬಾಂಬ್ ಸ್ಪೋಟ ಮಾಡಿದ್ದ ಆರ್‌ಎಸ್‌ಎಸ್: ಮಾಜಿ ಪ್ರಚಾರಕನಿಂದ ಸ್ಪೋಟಕ ಮಾಹಿತಿ ಬಹಿರಂಗ
ಸದ್ಯ ಚೆನ್ನೈ ಪೊಲೀಸರು ಬಂಧಿಸಿದ ಆರೋಪಿ ಕಳ್ಳನಾಗಿದ್ದಾನೆ ಎನ್ನಲಾಗುತ್ತಿದೆ. ಕಳ್ಳತನ ಮಾಡಿದ್ದ ಲ್ಯಾಪ್ಟಾಪ್ ಮಾರಾಟ ಮಾಡಲು ಹೋದಾಗ ಅನುಮಾನಗೊಂಡ ಅಂಗಡಿ ಮಾಲೀಕ ಐಡಿ ಕಾರ್ಡ್ ಕೇಳಿದ್ದಾರೆ. ಈ ವೇಳೆ ಸ್ಥಳದಿಂದ ಪರಾರಿಯಾಗಿದ್ದ ಹನುಮಂತಪ್ಪ ಬಳಿಕ ಅಂಗಡಿ ಮಾಲೀಕನ ಮೇಲೆ ದ್ವೇಷಕ್ಕೆ ಬಿದ್ದು ಮಾಲೀಕನ ಮೊಬೈಲ್ ನಂಬರ್ ಉಲ್ಲೇಖಿಸಿ ಹುಸಿ ಬಾಂಬ್ ಬೆದರಿಕೆ ಪತ್ರ ಹಾಕಿರುವುದಾಗಿ ತಿಳಿದುಬಂದಿದೆ. ಇದೀಗ ಕಳ್ಳನನ್ನು ಬಾಡಿ ವಾರಂಟ್ ಮೇಲೆ ಭಟ್ಕಳಕ್ಕೆ ತರಲು ಪೊಲೀಸರು ತಯಾರಿ ನಡೆಸಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ