ಚೆನ್ನೈ | ಎಂ.ಕೆ. ಸ್ಟಾಲಿನ್ ಮನೆ ಮೇಲೆ ಬಾಂಬ್ ಬೆದರಿಕೆ ಕರೆ

ಚೆನ್ನೈ: ರಾಜ್ಯಪಾಲರ ಅಧಿಕೃತ ನಿವಾಸಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ನಿವಾಸ, ನಟಿ ತ್ರಿಷಾ ಅವರ ಮನೆ  ಮೇಲೆ ಶುಕ್ರವಾರ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ : ಬೆಂಗಳೂರು | ವಾರ್ಡ್‌ ವಿಂಗಡಣೆಯ ಕರಡು ಅಧಿಸೂಚನೆ 5 ಪಾಲಿಕೆಗಳಿಗೆ ಒಟ್ಟು 368 ವಾರ್ಡ್‌ ರಚನೆ

ಬೆದರಿಕೆ ಹಿನ್ನೆಲೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಆದ್ದರಿಂದ ಹುಸಿ ಬಾಂಬ್ ಕರೆ ಎಂದು ಪರಿಗಣಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಎಂ ಸ್ಟಾಲಿನ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಕರೆ ಬಂದ ಹಿನ್ನೆಲೆ ಚೆನ್ನೈನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಇದನ್ನೂ ನೋಡಿ : ಗಾಂಧೀಜಿ ಪರಿಕಲ್ಪನೆ ಇಂದಿಗೂ ಪ್ರಸ್ತುತ – ನಾ ದಿವಾಕರ Janashakthi Media

Donate Janashakthi Media

Leave a Reply

Your email address will not be published. Required fields are marked *