ಬೆಂಗಳೂರು : ಜಂಟಿ ಪತ್ರಿಕಾಗೋಷ್ಠಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದು, ‘ಕೇಂದ್ರ ಸರ್ಕಾರವು ಕರ್ನಾಟಕದ ಪಾಲಿನ ಹಣವನ್ನು ನೀಡದೆ ಅನ್ಯಾಯ ಎಸಗುತ್ತಿದೆ. ಆದರೆ ಇದನ್ನು ಪ್ರಶ್ನಿಸಲು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರಿಗೆ ಬಾಯಿಯೇ ಬರುತ್ತಿಲ್ಲ. ಬಿಎಸ್ ಯಡಿಯೂರಪ್ಪ ಅವರಿಗೂ ಬಾಯಿ ಬರಲ್ಲ’ ಎಂದು ಆರೋಪಿಸಿದ್ದಾರೆ. ಬೊಮ್ಮಾಯಿ
ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಅನುದಾನ ನೀಡುವ ವಿಚಾರದಲ್ಲಿ ಕೇಂದ್ರದಿಂದ ಸಾಕಷ್ಟು ಅನ್ಯಾಯವಾಗುತ್ತಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್‌ಗೆ ಈ ಬಗ್ಗೆ ಮಾಹಿತಿಯೇ ಇಲ್ಲ ಎಂದರು. ಬೊಮ್ಮಾಯಿ
ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಈ ಬಗ್ಗೆ ತುಟಿಬಿಚ್ಚಿಲ್ಲ. ಹೀಗಾಗಿ ದೇಶದ ಗಮನ ಸೆಳೆಯಲು ನಾಡಿದ್ದು ಪ್ರತಿಭಟನೆ ನಡೆಸುತ್ತಿದ್ದೇವೆ. ಫೆಬ್ರವರಿ 7ರಂದು ನಡೆಯುವ ಪ್ರತಿಭಟನೆಗೆ ಎಲ್ಲರೂ ಸಹಕರಿಸಿ ಎಂದು ಮುಖ್ಯಮಂತ್ರಿಗಳು ಸಚಿವರು, ಶಾಸಕರಿಗೆ ಮನವಿ ಮಾಡಿದರು.
ಇದನ್ನು ಓದಿ : ಫೆ 12ರಿಂದ ಬಜೆಟ್ ಅಧಿವೇಶನ| ಬೆಳಗ್ಗೆ 9ರಿಂದಲೇ ಕಲಾಪಕ್ಕೆ ಚಿಂತನೆ – ಸ್ಪೀಕರ್ ಯು.ಟಿ. ಖಾದರ್
ಉತ್ತರದ ರಾಜ್ಯಗಳಿಗೆ ಅನುದಾನ ಕೊಡಿ, ಬೇಡವೆನ್ನುವುದಿಲ್ಲ. ಆದರೆ ದಕ್ಷಿಣದ ರಾಜ್ಯಗಳ ಕಡೆ ಗಮನಹರಿಸಿ. ರಾಜ್ಯದಿಂದ ಜೋಶಿ, ಶೋಭಾ, ಭಗವಂತ ಖೂಬಾ ಕೇಂದ್ರ ಮಂತ್ರಿಗಳಾಗಿದ್ದಾರೆ. ಒಂದು ದಿನವೂ ಅವರು ಬಾಯಿಬಿಡಲಿಲ್ಲ. ಸಂಸತ್‌ನಲ್ಲಿ ಇದರ ಬಗ್ಗೆ ಅವರು ಮಾತನಾಡಿದ್ದಾರಾ? ಇದೆಲ್ಲ ರಾಜ್ಯಕ್ಕೆ ಅನ್ಯಾಯ ಅಲ್ವೇ? ಜನ ಇವರನ್ನು ಆಶೀರ್ವಾದ ಮಾಡಿ ಕಳಿಹಿಸಿಲ್ಲವೇ? ಹಣಕಾಸು ಸಚಿವರು ನಮ್ಮ ರಾಜ್ಯದಿಂದಲೇ ಕೇಂದ್ರಕ್ಕೆ ಹೋಗಿದ್ದಾರೆ. ಅವರೇ ರಾಜ್ಯಕ್ಕೆ ಅನ್ಯಾಯ ಮಾಡಿದರೆ ಹೇಗೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಬಿಜೆಪಿ ನಾಯಕರನ್ನು ಉದ್ದೇಶಿಸಿ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ, ಕೇಂದ್ರ ಸಚಿವ ಅಮಿತ್ ಶಾ ಅವರ ಬಳಿ ಮಾತನಾಡಿ, ಪ್ರಧಾನಿಯವರ ಬಳಿ ಮಾತನಾಡಿರಪ್ಪಾ, ಸಂಸತ್‌ನಲ್ಲಿ ಮಾತನಾಡಿ. ಇಲ್ಲಿ ಸುಳ್ಳು ಹೇಳಿಕೊಂಡು ಯಾಕೆ ಇರುತ್ತೀರಿ. ಅಲ್ಲಿಗೆಹೋಗಿ ಕೇಳಿ, ಮಾಡಿಸಿ ಎಂದು ಲೇವಡಿ ಮಾಡಿದರು.
ರಾಜ್ಯ ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರು, 25 ಸಂಸದರು ರಾಜ್ಯಕ್ಕೆ ಸಿಗಬೇಕಾದ ಪಾಲಿನ ಬಗ್ಗೆ ಮಾತನಾಡುತ್ತಿಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸುರೆಂಬ ಭರವಸೆಯಿಂದ ಧರಣಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಫೆಬ್ರವರಿ 7ಕ್ಕೆ ಬೆಳಗ್ಗೆ 11 ಗಂಟೆಯಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧರಣಿ ನಡೆಸುವುದಾಗಿ ಅವರು ಈಗಾಗಲೇ ಘೋಷಣೆ ಮಾಡಿದ್ದಾರೆ.
ಇದನ್ನು ನೋಡಿ : ಲಿಂಗಾಯತರು ಮಾಂಸ ತಿನ್ನೋದ ಬಿಟ್ಟರೆ ಮಾತ್ರ ಲಿಂಗ ದೀಕ್ಷಾ ಕೊಡತೀವಿ ಅಂತ ಯಾಕೆ ಹೇಳತೀರಿ ?