ಬೆಂಗಳೂರು: ಫೆಬ್ರವರಿ 27ರಿಂದ ವಿಧಾನಸೌಧದಲ್ಲಿ ಪುಸ್ತಕ ಮೇಳ

ಬೆಂಗಳೂರು: ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ನಾಲ್ಕು ದಿನಗಳ ಕಾಲ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಯು.ಟಿ. ಖಾದರ್ ಅವರು, ಪುಸ್ತಕ ಮೇಳ ನಾಲ್ಕು ದಿನಗಳ ಕಾಲ ನಡೆಯಲಿದ್ದು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕವಿಗೋಷ್ಠಿಯೂ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಫೆ.27ರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೃಹತ್ ಪುಸ್ತಕ ಮೇಳವನ್ನು ಉಧ್ಘಾಟನೆ ಮಾಡಲಿದ್ದಾರೆ. ಸರ್ಕಾರದ ಹಲವು ಸಚಿವರು ಹಾಗೂ ಪ್ರತಿಷ್ಠಿತ ಸಾಹಿತಿಗಳು ಕೂಡ ಈ ಪುಸ್ತಕ ಮೇಳದಲ್ಲಿ ಭಾಗಿಯಾಗಲಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರ್ ಮತ್ತು ಸಾಹಿತಿ ದಾಮೋದರ್ ಮೌಜು ಭಾಗಿಯಾಗುತ್ತಿದ್ದಾರೆ.

ಈ ಕಾರ್ಯಕ್ರಮದಲ್ಲಿ ಅನೇಕ ಬರಹಗಾರರು ತಮ್ಮ-ತಮ್ಮ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು ಪ್ರತಿಯೊಂದು ಭಾಷಾ ಅಕಾಡೆಮಿಗಳಿಗೆ ಮೀಸಲಾದ ಸ್ಟಾಲ್ ಇರುತ್ತದೆ. ಇದಲ್ಲದೆ, ಮಕ್ಕಳ ಸಾಹಿತ್ಯ, ಸಿನಿಮಾ, ಸಂವಿಧಾನ ಮತ್ತು ಕನ್ನಡ ಸಾಹಿತ್ಯದಂತಹ ವಿಷಯಗಳ ಕುರಿತು ಬರಹಗಾರರು ಮತ್ತು ತಜ್ಞರೊಂದಿಗೆ ಪ್ರತಿದಿನ ಸಂವಾದ ನಡೆಯಲಿದೆ.

ಶಾಲೆಗಳಿಂದ ಬರುವ ಮಕ್ಕಳಿಗೆ ವಿಧಾನಸಭೆ ಸಭಾಂಗಣಗಳಿಗೆ ಭೇಟಿ ನೀಡಲು ಅವಕಾಶ ನೀಡಲಾಗುವುದು. ಪುಸ್ತಕಗಳನ್ನು ಖರೀದಿಗೆ ಮತ್ತು ಶಾಲೆಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಲು 2 ಲಕ್ಷ ರೂಪಾಯಿ ಅನುದಾನವನ್ನು ನೀಡುತ್ತಿದ್ದೇವೆ ಎಂದು ಹೇಳಿದರು.

ಇದನ್ನು ನೋಡಿ : ಜನಪರ ನೀತಿ, ಕಾರ್ಮಿಕ ವರ್ಗದ ಬೇಡಿಕೆಗಳ ಜಾರಿಗಾಗಿ ಸಿಐಟಿಯುನಿಂದ ಅಹೋರಾತ್ರಿ ಧರಣಿ Janashakthi Media

Donate Janashakthi Media

Leave a Reply

Your email address will not be published. Required fields are marked *