ಬೆಂಗಳೂರು: ಸಾಮಾನ್ಯವಾಗಿ ಅಂಗಡಿಯಲ್ಲಿ ನೀರಿನ ಬಾಟಲಿಗಳನ್ನು ನಾವು ನೀವು ಎಲ್ಲರೂ ಸಹ ಖರೀದಿಸಿದ್ದೇವೆ. ಆದರೆ ಈ ಬಾಟಲಿ ನೀರು ನಮ್ಮ ಆರೋಗ್ಯಕ್ಕೆ ಎಷ್ಟು ಸೇಫ್ ಎಂಬ ಈ ವಿಚಾರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಚ್ಚಿಟ್ಟಿದ್ದು, ಇನ್ಮುಂದೆ ಜನತೆ ಎಚ್ಚರಿಕೆ ವಹಿಸಲೇಬೇಕಾಗಿದೆ. ಬಾಟಲ್
ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಈ ಬಗ್ಗೆ ಮಾತನಾಡಿದ ದಿನೇಶ್ ಗುಂಡೂರಾವ್, ಈಗಾಗಲೇ 296 ಕುಡಿಯುವ ನೀರಿನ ಬಾಟಲ್ ಮಾದರಿಗಳ ಟೆಸ್ಟ್ ಮಾಡಿದ್ದು, ಇದರಲ್ಲಿ72 ಸುರಕ್ಷಿತ ಹಾಗೂ 95 ಮಾದರಿಗಳು ಅಸುರಕ್ಷಿತ ಎಂದು ವರದಿಯಾಗಿದೆ.
ಇದನ್ನೂ ಓದಿ: ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಏ.29ರಂದು ಬ್ರಹತ್ ಮೆರವಣಿಗೆ ಹಾಗೂ ಹಕ್ಕೊತ್ತಾಯ ಸಮಾವೇಶ
ಇದಲ್ಲದೇ ಹಸಿರು ಬಟಾಣಿಗೆ ಹಸಿರು ಕಲರ್ ಬರಿಸಲು ಟೆಟಾರ್ಜಿನ್ ಕೆಮಿಕಲ್ ಬಳಸಿರುವ ಆತಂಕಕಾರಿ ವಿಷಯ ಹೊರಬಿದ್ದಿದೆ. ಕುಡಿಯುವ ನೀರಿನ ಬಾಲಿ ಮಾತ್ರವಲ್ಲದೇ ಖಾರ ಮಿಕ್ಚರ್, ಪನ್ನೀರ್ ಹಾಗೂ ಐಸ್ಕ್ರೀಂ ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ತಯಾರಿಕಾ ಘಟಕಗಳಲ್ಲಿ ಲೋಪ ಕಂಡುಬಂದ ಹಿನ್ನೆಲೆ ನೋಟಿಸ್ ನೀಡಲಾಗಿರುವುದಾಗಿ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಇದನ್ನೂ ನೋಡಿ: ಆರೋಗ್ಯ ಹಕ್ಕು | ಆರೋಗ್ಯ ಎಂದರೆ ರೋಗವಿಲ್ಲದಿರುವುದೇ?! | ಸರಣಿ ಕಾರ್ಯಕ್ರಮ – ಸಂಚಿಕೆ 01 Janashakthi Media