ಬ್ರಹ್ಮರ ಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಸಮಾಲೋಚನಾ ಸಭೆ, ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ ಅಸ್ಥಿತ್ವಕ್ಕೆ

ಮಾರ್ಚ್ 3 ರಂದು ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಸಾಮೂಹಿಕ ಧರಣಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಟೋಲ್ ಗೇಟ್ ಗಳನ್ನು ತೆರಯಲು ಸಿದ್ದತೆಗಳು ಬಿರುಸುಗೊಳ್ಳುತ್ತಿರುವಂತೆಯೆ ಬಿ ಸಿ ರೋಡ್ ನಲ್ಲಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳು, ಟೋಲ್ ವಿರೋಧಿ ಹೋರಾಟಗಾರರು ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ನಡೆಸಬೇಕಾದ ಹೋರಾಟದ ಕುರಿತಾಗಿ ಸಮಾಲೋಚನಾ ಸಭೆ ನಡೆಸಿದರು. ಬ್ರಹ್ಮರ 

ಮಾಜಿ ಸಚಿವ ಬಿ ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಾನ ಮನಸ್ಕ ವಿವಿಧ ಸಂಘಟನೆಗಳು, ಪಕ್ಷಗಳಿಗೆ ಸೇರಿದ ಪ್ರತಿನಿಧಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಟೋಲ್ ಗೇಟ್ ತೆರವಿಗೆ ನಡೆಸಬೇಕಾದ ಮುಂದಿನ ಹೋರಾಟಗಳ ಕುರಿತು ಮಾರ್ಗದರ್ಶನ ಮಾಡಿದರು.

ಸಭೆಯ ಕೊನೆಯಲ್ಲಿ “ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ, ಬಂಟ್ವಾಳ” ರಚಿಸಲು, ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳ್ಳುವವರೆಗೂ ಅವಿರತ ಹೋರಾಟ ನಡೆಸಲು ಸಭೆ ನಿರ್ಧರಿಸಿತು.

ಇದನ್ನೂ ಓದಿ : ಶಿವಾಜಿ ಯಾರು? ಜನತೆಯ ನಿಜ ನಾಯಕ

ಹೋರಾಟ ಸಮಿತಿಗೆ ಬಿ ರಮಾನಾಥ ರೈ ಅವರನ್ನು ಗೌರವಾಧ್ಯಕ್ಷರಾಗಿ, ಬಿ ಶೇಖರ್ ಹಾಗು ಮೋಹನ್ ಶೆಟ್ಟಿ ಅವರನ್ನು ಸಂಚಾಲಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಮುಂದಿನ ದಿನದಲ್ಲಿ ಸಮಾನ ಮನಸ್ಕರಾದ ಎಲ್ಲರನ್ನು‌ ಒಳಗೊಂಡ ಸಮಾವೇಶ ನಡೆಸಿ ಪೂರ್ಣಪ್ರಮಾಣದ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.

ಮಾರ್ಚ್ 3. ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಬ್ರಹ್ಮರಕೂಟ್ಲು ನಲ್ಲಿ ಸಾಮೂಹಿಕ ಧರಣಿ

ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ನೂತನ ಸಮಿತಿ ವತಿಯಿಂದ, ಸಮಾನ ಮನಸ್ಕ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಮಾರ್ಚ್ 3. 2026 ರ ರಂದು ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 12.00 ರ ವರಗೆ ಬೃಹತ್ ಸಾಮೂಹಿಕ ಧರಣಿ ನಡೆಸುವುದಾಗಿ ಸಭೆ ತೀರ್ಮಾನಿಸಿತು. ಮುಂದಿನ ಹಂತದಲ್ಲಿ ಮತ್ತಷ್ಟು ತೀವ್ರತರವಾದ ಹೋರಾಟ ಸಂಘಟಿಸುವುದು, ಟೋಲ್ ಗೇಟ್ ತೆರವು ಗೊಳಿಸಿಯೇ ವಿಶ್ರಮಿಸುವುದು ಎಂದು ಸಭೆ ಘೋಷಿಸಿತು.

ಇದನ್ನೂ ನೋಡಿ : ದಲಿತ ನೋವಿನ ಧ್ವನಿ – ಸಂಬಳಿಗೋಲು | ಪುಸ್ತಕ ಬಿಡುಗಡೆ Janashakthi Media

Donate Janashakthi Media

Leave a Reply

Your email address will not be published. Required fields are marked *