ಚಿಕ್ಕಬಳ್ಳಾಪುರ: ಕರ್ನಾಟಕ ಇತಿಹಾಸದಲ್ಲೆ ಭ್ರಷ್ಟ ಮಂತ್ರಿ ಇದ್ದರೆ ಅದು ಸುಧಾಕರ್ ಮಾತ್ರ. ಆತನಿಗೆ ರಾಜಕೀಯ ಜನ್ಮಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಆದರೆ, ಆಪರೇಷನ್ ಕಮಲಕ್ಕೊಳಗಾಗಬೇಡ ಅಂತಾ ಮಧ್ಯರಾತ್ರಿ ವಿನಂತಿಸಿಕೊಂಡಿದ್ದರೂ, ಬೆಳಗ್ಗೆನೇ ಬಾಂಬೆಗೆ ಹೋಗಿಬಿಟ್ಟ ಎಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಸುಧಾಕರ್ ಗೆ ರಾಜಕೀಯ ಜನ್ಮ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. 2013ರಲ್ಲಿ ಅಂಜನಪ್ಪ ಅವರಿಗೆ ಟಿಕೇಟ್ ನೀಡುವಂತೆ ವೀರಪ್ಪ ಮೊಯ್ಲಿ ಅವರು ಹೇಳಿದರು, ಆದರೆ ನಾನು ಮತ್ತು ಪರಮೇಶ್ವರ್ ಅವರು ಸುಧಾಕರ್ ಅವರಿಗೆ ಟಿಕೇಟ್ ನೀಡಿದ್ದರಿಂದ ಇಂದು ಪಶ್ಚಾತಾಪ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನು ಓದಿ: ಒಂದು ಪೈಸೆ ಲಂಚ ಸ್ವೀಕರಿಸಿದ್ದರೆ ರಾಜಕೀಯ ನಿವೃತ್ತಿ ಪಡೆಯುವೆ: ಸಿದ್ಧರಾಮಯ್ಯ ಸವಾಲು
2013ರಲ್ಲಿ, 2018ರಲ್ಲಿ ಡಿ. ಸುಧಾಕರ್ ಶಾಸಕರಾಗಿ ನಮ್ಮ ಜೊತೆ ಇದ್ದರು. ನಂತರ ದುರಾಸೆಗೆ ಒಳಗಾಗಿ ಪಕ್ಷ ಬಿಟ್ಟು ಬಿಜೆಪಿ ಸೇರಿದರು ಎಂದು ಹೇಳಿದರು.
ಅಶ್ವತ್ಥ್ ನಾರಾಯಣ ಮತ್ತು ಸುಧಾಕರ್ ಅವರು ಪತ್ರಿಕಾಗೋಷ್ಠಿಯಲ್ಲಿ ನಮ್ಮ ಸರ್ಕಾರದ ಸಚಿವರ ಮೇಲೆ ಆರೋಪ ಮಾಡಿದ್ದಾರೆ. ಜಾರ್ಜ್ ಅವರು ವೈಟ್ ಟಾಪಿಂಗ್ ನಲ್ಲಿ ದುಡ್ಡು ಮಾಡಿದ್ದಾರೆ, ಸಿದ್ದರಾಮಯ್ಯ ಅವರು ರೀಡೂ ಮಾಡಿದ್ದಾರೆ ಎನ್ನುತ್ತಾರೆ. ಈ ರೀಡೂ ಪದವನ್ನು ಉಪಯೋಗಿಸಿದ್ದು ಹೈಕೋರ್ಟ್. ಸಿದ್ದರಾಮಯ್ಯ ಅವರ ಕಾಲದ ಆಡಿಟ್ ರಿಪೋರ್ಟ್ ಬಂದಿದೆ. ಭ್ರಷ್ಟಾಚಾರ ನಡೆದಿದೆ ಎನ್ನುತ್ತಾರೆ. ಇದೊಂದು ರೀತಿ ಭೂತದ ಬಾಯಲ್ಲಿ ಭಗವದ್ಗೀತೆ ಹಾಗಿದೆ. ರಾಜ್ಯದಲ್ಲಿ ಅತೀ ಭ್ರಷ್ಟ ಸಚಿವರು ಇದ್ದರೆ ಅದು ಸುಧಾಕರ್ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಸುಧಾಕರ್ ಆಪರೇಷನ್ ಕಮಲಕ್ಕೆ ಒಳಗಾಗಿ ಪಕ್ಷ ಬಿಟ್ಟು ಇನ್ನೊಂದು ಪಕ್ಷ ಸೇರಿ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಚುನಾವಣೆಯಲ್ಲಿ ಗೆದ್ದು ಬಂದಿದ್ದು. ಆತ ಒಬ್ಬ ದೊಡ್ಡ ಮೋಸಗಾರ ಎಂದು ಮೋಯ್ಲಿ ಅವರೇ ಹೇಳಿದ್ದರು. ಈ ಬಾರಿ ಚಿಕ್ಕಬಳ್ಳಾಪುರದ ಜನ ಯಾರಿಗೆ ಹೇಳುತ್ತಾರೆ ಅವರಿಗೆ ಟಿಕೇಟ್ ನೀಡುತ್ತೇವೆ. ಸುಧಾಕರ್ ಅವರನ್ನು ಸೋಲಿಸಿ ಮನೆಗೆ ಕಳಿಸುವ ಕೆಲಸ ಇಲ್ಲಿನ ಜನ ಮಾಡಬೇಕು ಎಂದು ಹೇಳಿದರು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ