ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಉಪಾಹಾರ ಸಭೆ

ಬೆಂಗಳೂರು: ನವೆಂಬರ್‌ 29ರಂದು ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌  ಉಪಾಹಾರ ಸಭೆ ನಡೆಸಿದ್ದು, ಈ ವಿಚಾರವಾಗಿ ಇಬ್ಬರೂ ತಮ್ಮ ಸಾಮಾಜಿಕ ಜಲತಾಣ “ಎಕ್ಸ್”ನಲ್ಲಿ ಮಾಹಿತಿ ನೀಡಿದ್ದಾರೆ.

ಸಿದ್ದರಾಮಯ್ಯ ಕುರ್ಚಿಯನ್ನ ಬಿಟ್ಟುಕೊಡ್ತಾರಾ? ಡಿಕೆ ಶಿವಕುಮಾರ್‌ ಅವರೇ ಸೈಲೆಂಟ್‌ ಆಗ್ತಾರಾ ? ಹೀಗೆ ಅನೇಕ ವಿಚಾರವಾಗಿ ಚರ್ಚೆಗಳು ಆಗುತ್ತಿದೆ. ಈ ನಡುವೆ ಕಾಂಗ್ರೆಸ್‌ ಹೈಕಮಾಂಡ್‌ ಇಬ್ಬರು ನೇರಾನೇರ ಕುಳಿತು ಈ ವಿಚಾರವಾಗಿ ಮಾತನಾಡಿಕೊಂಡು, ಒಂದು ನಿರ್ಧಾರಕ್ಕೆ ಬನ್ನಿ ಎಂದು ಹೇಳಿದೆ.

ಇದನ್ನೂ ಓದಿ: ಒರಿಸ್ಸಾ ಮೂಲದ ನ್ಯಾಯಮೂರ್ತಿ ಎಸ್ ಮುರಳೀಧರ್ ಅಂತಾರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ

ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಹಮ್ಮಿಕೊಳ್ಳಲಾಗಿತ್ತು. ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಇಬ್ಬರೂ ಫೋಟೋ ಶೇರ್‌ ಮಾಡಿಕೊಂಡಿದ್ದಾರೆ. ಅಲ್ಲದೇ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಬೆಳಗ್ಗಿನ ಉಪಹಾರ ಸೇವಿಸುತ್ತಾ, ಕೆಲಹೊತ್ತು ಮಾತುಕತೆ ನಡೆಸಿದೆ ಎಂದು ಸಿಎಂ ಪೋಸ್ಟ್‌ ಮಾಡಿದ್ದಾರೆ. ಹಾಗೆಯೇ, ಡಿಸಿಎಂ ಸಹ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಇಂದು ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಉಪಾಹಾರ ಸಭೆ ನಡೆಸಲಾಯಿತು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ನೋಡಿ: ದೇಶದ ಸಂಪತ್ತು‌ ಸೃಷ್ಟಿಸುವ ರೈತ – ಕಾರ್ಮಿಕರ ಹಿತ ರಕ್ಷಿಸಬೇಕಾದವರು ಯಾರು? ಎಸ್‌. ವರಲಕ್ಷ್ಮಿ ಮಾತುಗಳು Janashakthi

Donate Janashakthi Media

Leave a Reply

Your email address will not be published. Required fields are marked *