ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು

Please follow and like us:

ಕಲಬುರಗಿ :ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದ ವೇಳೆ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಐವರು ಪೈಕಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಇಂದು (ನವೆಂಬರ್ 25) ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್​ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.

Please follow and like us:
Donate Janashakthi Media

Leave a Reply

Your email address will not be published. Required fields are marked *