ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಡ ಗ್ರಾಮದಲ್ಲಿ ಮನೆಗೆ ನುಗ್ಗಿ ದುಷ್ಕರ್ಮಿಗಳು 9 ತಿಂಗಳ ಗರ್ಭಿಣಿ ಮಹಿಳೆಯ ಬರ್ಬರ ಹತ್ಯೆ ಮಾಡಿರವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮನೆಯಲ್ಲಿ ಇದ್ದ ಗರ್ಭಿಣಿ ಮಹಿಳೆಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ. ಮೃತ ಗರ್ಭಿಣಿ ಮಹಿಳೆಯನ್ನು ಸುವರ್ಣ ಮಾಂತಯ್ಯ ಮಠಪತಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನ | ಸರ್ಕಾರಿ ಶಾಲೆಗಳನ್ನು ಬಲಪಡಿಸಿ – ಗೊ.ರು ಚನ್ನಬಸಪ್ಪ
ಮಹಿಳೆಗೆ 4 ಹೆಣ್ಣು ಮಕ್ಕಳಿದ್ದು, 5 ನೇ ಮಗುವಿನ ಗರ್ಭಿಣಿಯಾಗಿದ್ದರು. 9 ತಿಂಗಳಾಗಿದ್ದು, ಇನ್ನೊಂದು ವಾರದಲ್ಲಿ ಹೆರಿಗೆಗೆ ದಿನಾಂಕ ನೀಡಲಾಗಿತ್ತು. ಆದರೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಹೊಟ್ಟೆಗೆ ಒದ್ದು ಹತ್ಯೆ ಮಾಡಿದ್ದಾರೆ. ಸದ್ಯ ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ನೋಡಿ: ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಕ್ಷೇಪಾರ್ಹ ಪದಬಳಸಿದ ಸಿಟಿ ರವಿ Janashakthi Media