ಬಿಸಿಯುನಲ್ಲಿ ಹೆಚ್ಚಿನ ಸೀಟು ಮೀಸಲಿಡಲು ಒತ್ತಾಯಿಸಿ ಎಸ್‌ಎಫ್‌ಐ ಪ್ರತಿಭಟನೆ

ಬೆಂಗಳೂರು: ಉತ್ತರ ವಿಶ್ವವಿದ್ಯಾಲಯದಲ್ಲಿ ಕೆಲವು ವಿಜ್ಞಾನ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗೆ ಅವಕಾಶವಿಲ್ಲದೆ ಇರುವ ಕಾರಣ ಬಿಎನ್‌ಯು ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಯಲ(ಬಿಸಿಯು)ದಲ್ಲಿ ಹೆಚ್ಚಿನ ಸೀಟು ಮೀಸಲಿಡಲು ಒತ್ತಾಯಿಸಿ, ತಮಗಾದ ಅನ್ಯಾಯವನ್ನು ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್‌ಎಫ್‌ಐ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮನವಿಯನ್ನು ಸಲ್ಲಿಸಿರುವ ಎಸ್‌ಎಫ್‌ಐ ಸಂಘಟನೆಯು ಬೆಂಗಳೂರು ವಿಶ್ವವಿದ್ಯಾಲಯದ 2018-2021ನೆಯ ಸಾಲಿನಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಬಿ.ಎಸ್ಸಿ ವಿದ್ಯಾರ್ಥಿಗಳು ಪದವಿ ಶಿಕ್ಷಣವನ್ನು ಪೂರೈಸಿದ್ದಾರೆ. ಸ್ನಾತಕೋತ್ತರ ಪದವಿಯನ್ನು ಶಿಕ್ಷಣದ  ರಸಾಯನ ಶಾಸ್ತ್ರ, ಪ್ರಾಣಿ ಶಾಸ್ತ್ರ, ಬಯೋ ಟೆಕ್ನಾಲಜಿ, ಮೈಕ್ರೋ ಬಯಾಲಜಿ, ಬಯೋ ಕೆಮಿಸ್ಟ್ರಿ ವಿಭಾಗಗಳು ಬೆಂಗಳೂರು ಉತ್ತರ ವಿವಿಯಲ್ಲಿ ಇಲ್ಲ. ಅಲ್ಲದೆ ಎಲ್ಲಾ ವಿಜ್ಞಾನ ಕೋರ್ಸ್‌ಗಳಿಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಅಡಿಯಲ್ಲಿ ಸಂಯೋಜಿತ ಕಾಲೇಜುಗಳ ಸಂಖ್ಯೆಯೂ ಕಡಿಮೆಯಿದೆ. ಆದರೆ ಸ್ನಾತಕೋತ್ತರ ಪದವಿ ಶಿಕ್ಷಣ ಪಡೆದುಕೊಳ್ಳಲು ಹಲವು ವಿದ್ಯಾರ್ಥಿಗಳು ಇದ್ದಾರೆ.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಅಡಿಯಲ್ಲಿ ಸಂಯೋಜಿತ ಕಾಲೇಜುಗಳ ಸಂಖ್ಯೆಯೂ ಕಡಿಮೆಯಿದೆ. ಈಗ ಅನ್ಯ ವಿಶ್ವವಿದ್ಯಾಲಯಗಳಲ್ಲಿ ನಮ್ಮನ್ನು ಬಾಹ್ಯ ವಿಶ್ವವಿದ್ಯಾಲಯಗಳೆಂದು ಪರಿಗಣಿಸಿ ಕೇವಲ ಒಬ್ಬ ವಿದ್ಯಾರ್ಥಿಗೆ (ಅದೂ ಯಾವುದೇ ಬೇರೆ ವಿಶ್ವವಿದ್ಯಾಲಯವಾಗಿರಬಹುದು) ಮಾತ್ರ ದಾಖಲಾತಿ ನೀಡುವುದಾಗಿ ನಿರ್ಧಾರ ತೆಗೆದುಕೊಂಡಿರುವುದು ನೂರಾರು ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಾಗಿದೆ ಎಂದು ಎಸ್‌ಎಫ್‌ಐ ಸಂಘಟನೆ ತಿಳಿಸಿದೆ.

ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕಾಲೇಜುಗಳು ಇಲ್ಲದೇ ಇರುವುದರಿಂದ ಬೇರೆ ಕಡೆಗಳಲ್ಲಿಯೂ ನಮಗೆ ದಾಖಲಾತಿ ಸಿಗುವುದು ಕಷ್ಟವಾಗುತ್ತಿದೆ. ಹೀಗೇ ಆದರೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಎಷ್ಟೋ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗಬೇಕಾಗುತ್ತದೆ ಎಂದು ಎಸ್‌ಎಫ್‌ಐ ಸಂಘಟನೆಯು ಆರೋಪಿಸಿದೆ.

ಬೆಂಗಳೂರು ಉತ್ತರ ವಿಶ್ವದ್ಯಾಲಯದಲ್ಲಿ ಎಲ್ಲ ವಿಭಾಗಗಳನ್ನು ಶುರುಮಾಡಿ ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ತಿಳಿಸಿರುವ ಸಂಘಟನೆಯು, ಎಲ್ಲಾ ವಿಭಾಗಗಳೂ ಪ್ರಾರಂಭವಾಗುವ ತನಕ ಮೂಲತಃ ಬೆಂಗಳೂರು ವಿಶ್ವವಿದ್ಯಾಲಯದ, ಹಾಲಿ ವಿಭಜಿತವಾಗಿರುವ ಮೂರು ವಿಶ್ವವಿದ್ಯಾಲಯಗಳನ್ನು ಒಂದೇ ಎಂದು ಪರಿಗಣಿಸಿ ಅಂಕಗಳ ಆಧಾರದ ಮೇಲೆ ದಾಖಲಾತಿ ಮಾಡಿಕೊಡಲು ಉಳಿದ ವಿಶ್ವವಿದ್ಯಾಲಯಗಳ ಮುಖ್ಯಸ್ಥರ ಜೊತೆ ಮಾತನಾಡಿ ಒಪ್ಪಂದ ಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಉನ್ನತ ವ್ಯಾಸಂಗದ ಭವಿಷ್ಯಕ್ಕೆ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಎಸ್ ಎಫ್ ಐ ಜಿಲ್ಲಾ ಕಾರ್ಯದರ್ಶಿ ದಿಲಿಪ್ ಶೆಟ್ಟಿ, ರಾಜ್ಯ ಸಹ ಕಾರ್ಯದರ್ಶಿ ಭೀಮನಗೌಡ, ಮುಖಂಡರಾದ ಪವನ್ ಕುಮಾರ್, ಅಭಿಷೇಕ, ಚಂದ್ರಶೇಖರ್ ಜನನಿ, ವಿದ್ಯಾಶ್ರೀ, ದಿವ್ಯ, ಕಾರ್ತಿಕ್ ಅಮಿತ್, ಕುಸುಮ, ನಳಿನಿ ಮತ್ತಿತರರು ಇದ್ದರು.

Donate Janashakthi Media

Leave a Reply

Your email address will not be published. Required fields are marked *