ಯಡಿಯೂರಪ್ಪ ಪೋಕ್ಸೋ ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಂಗಳೂರು: 17 ವಯಸ್ಸಿನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ  ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ  ವರ್ಗಾಯಿಸಿ ಡಿಜಿಪಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ ವರ್ಗಾಯಿಸಲು ಆದೇಶಿಸಿದೆ.

ಇದನ್ನೂ ಓದಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ: ಬಿಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಏನಿದು ಘಟನೆ

ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಮತ ಸಿಂಗ್ ತಮ್ಮ ಸಂತ್ರಸ್ತ ಮಗಳೊಂದಿಗೆ 2024ರ ಫೆಬ್ರವರಿ 2 ರಂದು ಬಿಎಸ್​ವೈ ಮನೆಗೆ ತೆರಳಿದ್ದಾರೆ. ಅಪ್ರಾಪ್ತೆ ಮೇಲೆ ಈ ಹಿಂದೆ ಅತ್ಯಾಚಾರವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣವನ್ನು ಎಸ್​ಐಟಿಗೆ ನೀಡಿ ನ್ಯಾಯ ಒದಗಿಸುವಂತೆ ಕೋರಿ ಬಿಎಸ್​ವೈ ಅವರನ್ನು ಕೇಳಿಕೊಂಡಿದ್ದಾರೆ. ಈ ವೇಳೆ ನಮ್ಮೊಂದಿಗೆ ಮಾತನಾಡಲು 9 ನಿಮಿಷಗಳ ಕಾಲಾವಕಾಶ ನೀಡಿದ್ದರು. ಬಳಿಕ ನನ್ನ ಮಗಳನ್ನು ರೂಂ ಗೆ ಕರೆದುಕೊಂಡು ಹೋದ ಮಾಜಿ ಸಿಎಂ ಯಡಿಯೂರಪ್ಪ ಅವರು ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ತಾಯಿ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಈ ಹಿನ್ನೆಲೆ ಬಿಎಸ್​ ಯಡಿಯೂರಪ್ಪ ವಿರುದ್ದ ಪೋಕ್ಸೋ ಹಾಗು 354(A) ಅಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ.

Donate Janashakthi Media

Leave a Reply

Your email address will not be published. Required fields are marked *