ಸೋಮವಾರ ಪೋಕ್ಸೋ ಪ್ರಕರಣದ ವಿಚಾರಣೆಗೆ ಬಿಎಸ್ವೈ

ಬೆಂಗಳೂರು: ಪೋಕ್ಸೋ ಪ್ರಕರಣದ ವಿಚಾರಣೆಗೆ‌ ಸೋಮವಾರ ಹಾಜರಾಗುವುದಾಗಿ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿಜೆಪಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಎಫ್‌ಐಆರ್ ದಾಖಲು ಬಳಿಕ ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದ ಯಡಿಯೂರಪ್ಪ ರಿಂದು ನ್ಯಾಯಾಲಯ ತಕ್ಷಣಕ್ಕೆ ಬಂಧಿಸಿದಂತೆ ಮಧ್ಯಂತರ ಆದೇಶ ನೀಡಿದ ಹಿನ್ನಲೆಯಲ್ಲಿ ‌ಬೆಂಗಳೂರಿಗೆ ಆಗಮಿಸಿದ್ದು, ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ: ಸಿದ್ದರಾಮಯ್ಯ

ನಿಗದಿತ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ಹೋಗಿದ್ದೆ. 17 ರಂದು ವಿಚಾರಣೆಗೆ ಬರುವುದಾಗಿ ನಾನು ಮೊದಲೇ ತಿಳಿಸಿದ್ದೆ. ಹೈಕೋರ್ಟ್ ಸಹ ತಡೆಯಾಜ್ಞೆ ‌ನೀಡಿದೆ. ಸೋಮವಾರ ನಾನು ವಿಚಾರಣೆಗೆ ಹೋಗುತ್ತಿದ್ದೇನೆ.ಅನಾವಶ್ಯಕವಾಗಿ ಗೊಂದಲ ಉಂಟು ಮಾಡುವ ಕೆಲಸ ಮಾಡಿದ್ದರು.

ನಾನು ಯಾರ ಮೇಲೂ ದೂರುವುದಿಲ್ಲ. ಕಾಲವೇ ಎಲ್ಲ ತೀರ್ಮಾನ ಮಾಡಲಿದೆ, ವಾಸ್ತವ ಏನು ಎಂದು ಜನರಿಗೆ ಗೊತ್ತಿದೆ.  ಕುತಂತ್ರ ಮಾಡುತ್ತಿರುವವರಿಗೆ ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಇದನ್ನೂ ನೋಡಿ: ಹಿಂದಿ ರಾಜ್ಯಗಳಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ : ಸೀಟು ಮತಗಳಿಕೆ ಕುಸಿದ 5 ರಾಜ್ಯಗಳುJanashakthi Media

Donate Janashakthi Media

Leave a Reply

Your email address will not be published. Required fields are marked *