ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಕೋಲ್ಕತ್ತಾ: ಸಿಪಿಎಂ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಇಂದು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. 

ಬುದ್ದದೇವ್ ಭಟ್ಟಾಚಾರ್ಯ ಕೋಲ್ಕತಾದ ತಮ್ಮ ನಿವಾಸದಲ್ಲಿ ಗುರುವಾರ ಬೆಳಿಗ್ಗೆ 8.20ರ ಸುಮಾರಿಗೆ ನಿಧನರಾಗಿದ್ದಾರೆ. ಅವರು ಪತ್ನಿ ಮೀರಾ ಮತ್ತು ಪುತ್ರಿ ಸುಚಿತ್ರ ಅವರನ್ನು ಅಗಲಿದ್ದಾರೆ ಎಂದು ಪಶ್ಚಿಮ ಬಂಗಾಳದ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ತಿಳಿಸಿದ್ದಾರೆ. 

ಇದನ್ನೂ ಓದಿ: ಶೀಘ್ರದಲ್ಲೇ 650 ಸಹಾಯಕ ಪ್ರಾಧ್ಯಾಪಕರು, 1200 ನರ್ಸ್ ಗಳ ನೇಮಕ: ಸಚಿವ ಶರಣಪ್ರಕಾಶ್‌ ಪಾಟೀಲ್

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬುದ್ದದೇವ್ ಭಟ್ಟಾಚಾರ್ಯ ಕಳೆದ ಕೆಲವು ತಿಂಗಳಿಂದ ಪದೇಪದೆ ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಪಶ್ಚಿಮ ಬಂಗಾಳದ ಅತ್ಯಂತ ಯಶಸ್ವಿ ಸಿಎಂ ಆಗಿದ್ದ ಜ್ಯೋತಿ ಬಸು ನಂತರ 2000ರಿಂದ 2011ರವರೆಗೆ ಬುದ್ಧದೇವ್ ಭಟ್ಟಾಚಾರ್ಯ ಸಿಎಂ ಆಗಿ ಆಡಳಿತ ನಡೆಸಿದ್ದರು.

ಕ್ಷೀಣಿಸುತ್ತಿರುವ ಆರೋಗ್ಯದಿಂದಾಗಿ ಅವರು ರಾಜಕೀಯ ರಂಗದಿಂದ ದೂರ ಉಳಿದಿದ್ದರು. ಅವರು ಬಹಳ ಸಮಯದಿಂದಲೂ ತಮ್ಮ ಪಾಮ್‌ ಅವೆನ್ಯೂ ಅಪಾರ್ಟ್‌ಮೆಂಟ್‌ನಲ್ಲೇ ಉಳಿದಿದ್ದರು. ಕೋಲ್ಕತ್ತಾದ ಪ್ರತಿಷ್ಠಿತ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ ರಾಜಕೀಯಕ್ಕೆ ಬರುವ ಮೊದಲು ಶಿಕ್ಷಕರಾಗಿದ್ದರು. ಡಿವೈಎಫ್‌ಐನ ರಾಜ್ಯ ಪ್ರಧಾನಕಾರ್ಯದರ್ಶಿಯಾಗಿ ಯುವಜನ ಚಳುವಳಿ ಸಂಘಟಿಸಿದ್ದರು. ನಂತರ,  ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದ ಅವರು 2000ದಲ್ಲಿ ಜ್ಯೋತಿ ಬಸು ಅಧಿಕಾರದಿಂದ ಇಳಿಯುವ ಮೊದಲು ಉಪ ಮುಖ್ಯಮಂತ್ರಿಯಾಗಿದ್ದರು.

 

Donate Janashakthi Media

Leave a Reply

Your email address will not be published. Required fields are marked *