ಸಂಸತ್‌ ಬಜೆಟ್‌ ಅಧಿವೇಶನ ಆರಂಭ; ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಿದ ಬಿಆರ್‌ಎಸ್‌, ಎಎಪಿ

ನವದೆಹಲಿ: ಇಂದಿನಿಂದ ಸಂಸತ್ತಿನ ಬಜೆಟ್‌ ಅಧಿವೇಶನ ಆರಂಭವಾಗಿದ್ದು, ಕಲಾಪದ ಮೊದಲ ದಿನವಾದ ಇಂದು(ಜನವರಿ 31) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನವನ್ನು ಉದ್ದೇಶಿಸಿ ಭಾಷಣ ಆರಂಭಿಸಿದ್ದಾರೆ, ಈ ವೇಳೆ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತದಲ್ಲ ವಿಫಲವಾಗಿದೆ ಎಂದು ಆರೋಪಿಸಿ ಬಿಆರ್‌ಎಸ್‌ ಹಾಗೂ ಎಎಪಿ ಪಕ್ಷಗಳು ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಿದೆ.

ಆಮ್‌ ಅದ್ಮಿ ಪಕ್ಷ(ಎಎಪಿ)ದ ನಾಯಕ ಮತ್ತು ಸಂಸದ ಸಂಜಯ್ ಸಿಂಗ್ ಮಾತನಾಡಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನಮ್ಮ ಪಕ್ಷವು ಗೌರವಿಸಲಿದೆ ಆದರೆ, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರದ ವಕ್ತಾರರ ನಿಲುವು ಮತ್ತು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ನಾವು ಸಂಸತ್ತಿನ ಜಂಟಿ ಅಧಿವೇಶನವನ್ನು ಬಹಿಷ್ಕರಿಸುತ್ತಿದ್ದೇವೆ ಎಂದರು.

ಇದನ್ನು ಓದಿ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ: ಸಂಸತ್ತಿನ ಬಜೆಟ್‌ ಅಧಿವೇಶನದಲ್ಲಿ ವಿರೋಧ ಪಕ್ಷಗಳು ತೀವ್ರ ವಿರೋಧ

ಭಾರತ್ ರಾಷ್ಟ್ರ ಸಮಿತಿ ರಾಜ್ಯಸಭೆಯ ನಾಯಕ ಕೇಶವರಾವ್ ಮಾತನಾಡಿ, ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರದ ವೈಫಲ್ಯಗಳು ಅಧಿಕ ಪ್ರಮಾಣದಲ್ಲಿ ರಾರಾಜಿಸುತ್ತಿದ್ದು, ಅವರು, ಎಲ್ಲಾ ರಂಗಗಳಲ್ಲಿ ಆಡಳಿತದಲ್ಲಿ ಸೋತಿದ್ದಾರೆ ಎಂದು ಆರೋಪಿಸಿ ಬಹಿಷ್ಕರಿದರು.

ಕಾಂಗ್ರೆಸ್ ಸಂಸದರ ಗೈರು

ನೆನ್ನೆಗೆ ಮುಕ್ತಾಯ ಕಂಡ ಕಾಂಗ್ರೆಸ್‌ ಪಕ್ಷದ ಭಾರತ ಐಕ್ಯತಾ ಯಾತ್ರಾ ಸಮಾರೋಪ ಸಮಾರಂಭ ನಡೆದಿದೆ.  ಪ್ರತಿಕೂಲ ಹವಾಮಾನದ ಕಾರಣ ವಿಮಾನ ಸಂಚಾರ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ರಾಷ್ಟ್ರಪತಿಗಳ ಭಾಷಣದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಹಲವು ಕಾಂಗ್ರೆಸ್ ಸಂಸದರು ಭಾಗವಹಿಸಲು ಸಾಧ್ಯವಾಗುವುದಿಲ್ಲ. ಎಂದು ಕಾಂಗ್ರೇಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *