ಬಜೆಟ್ ಘೋಷಣೆ ಜೂ 20 ರೊಳಗೆ ಅನುಷ್ಠಾನಕ್ಕೆ ತನ್ನಿ :ಎನ್ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಹೊಸ ಕೃಷಿ ಯೋಜನೆಗಳನ್ನು ಜೂ 20 ರೊಳಗೆ ಅನುಷ್ಠಾನಕ್ಕೆ ತರುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕಟ್ಟುನಿಟ್ಟಿನ‌ ಸೂಚನೆ ನೀಡಿದ್ದಾರೆ. ಬಜೆಟ್ 

ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ 2024-25 ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿರುವ ಕೃಷಿ ಇಲಾಖೆ ಹೊಸ ಯೋಜನೆಗಳ ಅನುಷ್ಠಾನ ಕುರಿತು ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ನಿರ್ದೇಶನ ನೀಡಿದರು. ಬಜೆಟ್  

2024-25 ರ ಆಯವ್ಯಯಲ್ಲಿ ಘೋಷಣೆಯಾದ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರ್ಕಾರಿ ಆದೇಶ ಹೊರಡಿಸಿದ್ದು ಬಾಕಿ ಉಳಿದ 7 ಘೋಷಣೆಗಳಿಗೆ ವಾರದೊಳಗೆ ಸರ್ಕಾರಿ ‌ಆದೇಶ ಹೊರಡಿಸಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಎಂದು ಸೂಚಿಸಿದರು.

ಸರ್ಕಾರದಲ್ಲಿ ಅನುದಾನಕ್ಕೆ ಕೊರತೆ ಇಲ್ಲ.ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕ ಗೊಳಿಸಲು ರೈತ ಸಮೃದ್ದಿ ಯೋಜನೆ ರೂಪಿಸಿದ್ದು ಇದು ಸಮರ್ಪಕವಾಗಿ ತಲುಪಬೇಕು ಇದು ರಾಜ್ಯ ಸರ್ಕಾರದ ಆಶಯ ಕೃಷಿ,ತೋಟಗಾರಿಕೆ, ಪಶು ಸಂಗೋಪನೆ ಒಳಗೊಂಡಂತೆ ವಿವಿಧ ಇಲಾಖೆಗಳ ಯೋಜನೆಗಳ ಸಂಯೋಜನೆ ಮೂಲಕ ಕಾರ್ಯಕ್ರಮ ಅನುಷ್ಠಾನ ಮಾಡಬೇಕು ಎಂದು ಚಲುವರಾಯ ಸ್ವಾಮಿ ಹೇಳಿದರು.

ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಪೂರ್ವಾವಲೋಕನ ಆಗಬೇಕಿದೆ.ಈ ಬಗ್ಗೆ ಅಧಿಕಾರಿಗಳು ಚರ್ಚಿಸಿ ಅಭಿಪ್ರಾಯ ತಿಳಿಸಬೇಕು.ಪ್ರತ್ಯೇಕ ಆಹಾರ ಸಂಸ್ಕೃರಣೆ ಮತ್ತು ರಪ್ತು ಉತ್ತೇಜನ ಆಯುಕ್ತಾಲಯ ಸ್ಥಾಪನೆ ಮತ್ತು ಕೆಲ ಸಂಸ್ಥೆಗಳನ್ನು ಅದರ ವ್ಯಾಪ್ತಿಗೆ ತರುವ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಸಿದ್ಧಪಡಿಸಲು ಸೂಚಿಸಿದ ಚೆಲುವರಾಯಸ್ವಾಮಿ, ಕರ್ನಾಟಕ ರೈತ ಸಮೃದ್ದಿ ಯೋಜನೆ,ಕೃಷಿ ಅಭಿವೃದ್ಧಿ ಪ್ರಾಧಿಕಾರ, ಕೃಷಿ ಭಾಗ್ಯ ಯೋಜನೆ, ಸಮುದಾಯದ ಬೀಜ‌ ಬ್ಯಾಂಕ್ ಸ್ಥಾಪನೆ, ನಮ್ಮ ಮಿಲೆಟ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಆಗಬೇಕು ವ್ಯವಸ್ಥಿತ ಚಾಲನೆ ನೀಡಬೇಕು ಎಂದು ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದರು.

ಇದನ್ನು ಓದಿ : ಅಗ್ನಿವೀರ್ ಯೋಜನೆ ಬಗ್ಗೆ ಕೇಂದ್ರಸರ್ಕಾರದಿಂದ ಪರಿಶೀಲನೆ: ಶಿಫಾರಸು ಕೇಳಿದ ಸರ್ಕಾರ..ಸೇನೆ ಕೂಡ ನಡೆಸಿದ ಸಮೀಕ್ಷೆ… ಏನು ಬದಲಾಗಬಹುದು?

ಬೆಂಗಳೂರಿನಲ್ಲಿ ಆರ್.ಕೆ ಶಾಲಾ ಕೃಷಿ ಕ್ಷೇತ್ರ ವನ್ನು ತಾಂತ್ರಿಕತೆ ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಅಭಿವೃದ್ಧಿ ಪಡಿಸಿ ರೈತರಿಗೆ ಕೀಟ /ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ ಸಲಹೆ ನೀಡಲು ಇ ಸ್ಯಾಪ್ ತಂತ್ರಾಂಶ ಸರಿಯಾಗಿ ಬಳಸಬೇಕು ಅದನ್ನು ಉಪಯೋಗಿಸುವವರಿಗೆ ಸೂಕ್ತ ತರಬೇತಿ ಒದಗಿಸಿ ಎಂದು ಸಚಿವರು ತಿಳಿಸಿದರು.

ಬೆಳೆ ಉತ್ಪಾದಕತೆ ಮುನ್ಸೂಚಿಸಲು ದತ್ತಾಂಶ ಅಭಿವೃದ್ಧಿ ಪಡಿಸಿ.‌‌. ರೈತ ಉತ್ಪಾಕತೆ ಸಂಸ್ಥೆಗಳಿಗೆ ಬೆಂಬಲ ನೀಡಲು ಅಗ್ರಿ ಅ್ಯಕ್ಸಿಲೇಟರ್ ಪ್ಲ್ಯಾಟ್ ಫಾರ್ಮ್ ಮೂಲಕ ಕೃಷಿ ವಲಯದ ಸ್ಟಾರ್ಟಫ್ ಗಳನ್ನು ಉತ್ತೇಜಿಸುವ ಅನುಷ್ಠಾನ ಚುರುಕುಗೊಳಿಸಿ ಎಂದು ಸಚಿವರು ಹೇಳಿದರು‌‌‌.

ಇಲಾಖೆ ಯಲ್ಲಿ ಬಾಕಿ ಉಳಿದ ಕಡತಗಳನ್ನು ಪೂರ್ಣ ಗೊಳಿಸಿ ವಿಲೇವಾರಿಯಾಗುವಂತೆ ನಿಗಾವಹಿಸಿ ಎಂದು ಸೂಚಿಸಿದ ಸಚಿವ ಚೆಲುವರಾಯಸ್ವಾಮಿ, ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಅಧಿಕಾರಿಗಳು ರೈತರಿಗೆ ಸೂಕ್ತ ಮಾಹಿತಿ‌ ಮಾರ್ಗದರ್ಶನ ನೀಡಬೇಕು.ಅನಗತ್ಯ ಗೊಂದಲ ಸೃಷ್ಟಿ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್ , ಹಣಕಾಸು ಇಲಾಖೆ ಅನುಮೋದನೆಯೊಂದಿಗೆ ಶೀಘ್ರವಾಗಿ ಬಾಕಿ ಉಳಿದ ಆದೇಶ ಘೋಷಣೆಗಳು ಸರ್ಕಾರಿ ಹೊರಡಿಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಬಜೆಟ್ 

ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗು ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಅವರು ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಹಲವು ಸಲಹೆಗಳನ್ನು ನೀಡಿದರು.

ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಆಹಾರ ಸಂಸ್ಕರಣೆ ಹಾಗೂ ಕಟಾವು ತಂತ್ರಜ್ಞಾನ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಜಲಾನಯನ ಅಭಿವೃದ್ಧಿ ಆಯುಕ್ತ ಡಾ. ಗಿರೀಶ್, ಕೃಷಿ ಇಲಾಖೆ ನಿರ್ದೇಶಕ ಡಾ. ಜಿ.ಟಿ.ಪುತ್ರ, ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನು ನೋಡಿ : ಹಿಂದಿ ರಾಜ್ಯಗಳಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ : ಸೀಟು ಮತಗಳಿಕೆ ಕುಸಿದ 5 ರಾಜ್ಯಗಳುJanashakthi Media

Donate Janashakthi Media

Leave a Reply

Your email address will not be published. Required fields are marked *