ಬೆಳಗಾವಿ: ಮಾದಕ ದ್ರವ್ಯ ಮಾರಾಟಗಾರರಿಗೆ ಮನೆ ಮಾಲೀಕರು ಮನೆಯನ್ನು ಬಾಡಿಗೆಗೆ ನೀಡಿದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸೆಂಬರ್ 11ರಂದು ಚಳಿಗಾಲದ ಅಧಿವೇಶನದಲ್ಲಿ ಎಂಎಲ್‌ಸಿ ಕೆ. ಅಬ್ದುಲ್ ಜಬ್ಬಾರ್ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ಮಾರಾಟ
ಅದೇ ರೀತಿಯಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಅಭಿಯಾನಗಳನ್ನು ನಡೆಸಿ, ಮನವರಿಕೆ ಮಾಡಲಾಗುವುದು. ಈ ಮೂಲಕ ಮಾದಕ ವಸ್ತುನಂತಹ ಕಾನೂನು ಬಾಹಿರ ಚಟುವಟಿಕೆಯಂತಹ ಪಿಡುಗನ್ನು ಸಂಪೂರ್ಣವಾಗಿ ತೊಡೆದುಹಾಕಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು.
ಇದನ್ನೂ ಓದಿ: ಅಂಧ್ರಪ್ರದೇಶ | ಭೀಕರ ಬಸ್ ಅಪಘಾತ : ರಾಜುಗರಿಮೆಟ್ಟ ಘಾಟ್ ಬಳಿ ಕಣಿವೆಗೆ ಉರುಳಿದ ಬಸ್ 9ಜನರು ಸಾವು
ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಬೆಂಗಳೂರು ನಗರ ಪೊಲೀಸರು ಕಳೆದ ವಾರದಲ್ಲಿ ಒಂದು ಸುಮಾರು ಒಂದು ಸಾವಿರಕ್ಕೂ ಹೆಚ್ಚು ಶಾಲೆಗಳಿಗೆ ಭೇಟಿ ನೀಡಿ ಜಾಗೃತಿ ಅಭಿಯಾನ ನಡೆಸಿದ್ದಾರೆ ಎಂದು ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ಅಂದರೆ 2025ರಲ್ಲಿ 5,747 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 4,500 ಪ್ರಕರಣಗಳಲ್ಲಿ ತನಿಖೆ ಪೂರ್ಣಗೊಂಡಿದೆ. ಅದೇ ರೀತಿಯಲ್ಲಿ ಕಳೆದ ಸಾಲಿನಲ್ಲಿ 2024ರಲ್ಲಿ 4,168 ಮಾದಕ ದ್ರವ್ಯ ಸಂಬಂಧಿತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 4,091 ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ವಿವರಿಸಿದರು. ಇದು ಕಳೆದ ಸಾಲಿಗಿಂತ ಈ ಬಾರಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಇಲ್ಲಿಯೇ ಇರಲು ಪ್ರಕರಣ ಜೀವಂತವಾಗಿರಲು ವಿದೇಶಿಗಳ ಪ್ರಯತ್ನ
ಅನೇಕರ ಪ್ರಕರಣಗಳಲ್ಲಿ ಕೆಲವು ವಿದೇಶಿ ಪ್ರಜೆಗಳನ್ನು ಮಾದಕ ವಸ್ತು ಜಾಲ ಪ್ರಕರಣಗಳಲ್ಲಿ ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಅವರು ಇಲ್ಲಿಯೇ ಉಳಿಯುವ ಉದ್ದೇಶದಿಂದ ಪ್ರಕರಣ ಜೀವಂತವಾಗಿಡಲು ಅವರು ಪ್ರಯತ್ನಿಸುತ್ತಾರೆ. ಕಳೆದ ಎರಡು ವರ್ಷದಿಂದ ಇಲ್ಲಿಯವರೆಗೆ ಸುಮಾರು 300 ಜನರನ್ನು ಗಡೀಪಾರು ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.
ಕಾಂಗ್ರೆಸ್ ಶಾಸಕ ಅಬ್ದುಲ್ ಜಬ್ಬಾರ್ ಅವರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಜಾಗತಿಕವಾಗಿ ಮಾದಕ ವಸ್ತು ಉತ್ಪಾದನೆ ಮತ್ತು ಮಾರಾಟ ಹೆಚ್ಚುತ್ತಿರುವುದು ಆತಂಕದ ಸಂಗತಿ ಎಂದರರು. ಇದೊಂದು ಅಂತರರಾಷ್ಟ್ರೀಯ ಜಾಲವಾಗಿದ್ದು, ಅದನ್ನು ಬುಡಸಮೇತ ಕಿತ್ತು ಹಾಕಬೇಕಾಗಿರುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ವಿವರಿಸಿದರು.
ರೇವ್ ಪಾರ್ಟಿ ಮೇಲೆ ನಿಗಾ
ಬೆಂಗಳೂರು ನಗರ ಸೇರದಂತೆ ರಾಜ್ಯದಲ್ಲಿ ನಡೆಯುತ್ತಿರುವ ರೇವ್ ಪಾರ್ಟಿಗಳ ಮೇಲೆ ಪೊಲೀಸರು ಸಾಕಷ್ಟು ನಿಗಾ ವಹಿಸಲಾಗಿದೆ. ಪಾರ್ಸೆಲ್ ಕೇಂದ್ರಗಳು, ಕೊರಿಯರ್ ಕೇಂದ್ರಗಳು ರೆಸಾರ್ಟ್ ಮತ್ತು ತೋಟದ ಮನೆಗಳ ಮೇಲೆ ಪೊಲೀಸರು ಹಠಾತ್ ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ ಎಂದರು.
ಇದನ್ನೂ ನೋಡಿ: ಡ್ರಗ್ಸ್ ಮಾಫಿಯಾ :ಯುವಜನ ಟಾರ್ಗೆಟ್ ಯಾಕೆ? ಪೊಲೀಸರ ಬಲೆಗೆ ಬೀಳದ ಪೆಡ್ಲರ್‌ಗಳು Janashakthi Media
