ಬೆಂಗಳೂರು |ಉತ್ತರ ಪ್ರದೇಶದ ಬುಲ್ಡೋಜರ್ ನೀತಿ ಕರ್ನಾಟಕದಲ್ಲೂ ತರುವ ಕೆಲಸ ನಡೆಯುತ್ತಿದೆ – ಪಿಣರಾಯಿ ವಿಜಯನ್ ತೀವ್ರ ಟೀಕೆ

ಬೆಂಗಳೂರು: ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ, ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬಿಸಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರಿನ ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ, ಅಲ್ಲಿ ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದವು.

ಇದನ್ನೂ ಓದಿ : ಮಂಡ್ಯ | ಗಾಂಧಿ ಹಾಗೂ ಅಂಬೇಡ್ಕರ್‌ ಜಯಂತಿಗೆ ಮಾಂಸಾಹಾರ ನಿಷೇಧ ಏಕೆ? ಅಂಕಣಕಾರ ಶಿವಸುಂದರ್‌

 ಈ ಚಳಿಯಲ್ಲಿ ಮಕ್ಕಳ, ಮಹಿಳೆಯರನ್ನು ಬೀದಿಗೆ ಹಾಕಿದ್ದಾರೆ.  ಇದೀಗ ಏಕಾಏಕಿ ಈ ಚಳಿಗಾಲದಲ್ಲಿ ಮನೆಗಳನ್ನು ನೆಲಸಮ ಮಾಡಿದರೆ ಅವರು ಎಲ್ಲಿಗೆ ಹೋಗಬೇಕು ಎಂದು ಕೇರಳ ಮುಖ್ಯಮಂತ್ರಿಗಳು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳನ್ನು ಬೀದಿಗೆ ಹಾಕಿ,ಬುಲ್ಡೋಜರ್ ರಾಜ್ ಕ್ರಮವನ್ನು ಕರ್ನಾಟಕ ಕಾಂಗ್ರೆಸ್​​ ಸರ್ಕಾರ ಅನುಸರಿಸುತ್ತಿದೆ” ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಕ್ಸ್​​​ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

ಭಯ ಮತ್ತು ಕ್ರೂರತೆಯ ಬಲದ ಮೂಲಕ ಆಡಳಿತ ನಡೆಸುವಾಗ, ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವ ಘನತೆಯು ಮೊದಲ ಬಲಿಪಶುಗಳಾಗುತ್ತವೆ.  ದುಃಖಕರ ವಿಚಾರವೆಂದರೆ ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಈಗ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೂಡ ಮಾಡುತ್ತಿದೆ. ಈ ಮೋಸದ ಪ್ರವೃತ್ತಿಯನ್ನು ವಿರೋಧಿಸಲು ಮತ್ತು ಸೋಲಿಸಲು ಎಲ್ಲಾ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಟ್ಟಾಗಿ ಒಟ್ಟುಗೂಡಬೇಕು ಎಂದು ಹೇಳಿದ್ದಾರೆ.

ಇದನ್ನೂ ನೋಡಿ : ಕಮ್ಯುನಿಸ್ಟ್‌ ಪಕ್ಷಗಳು ದುಡಿಯುವ ಜನ, ಭೂ ರಹಿತರ ಪರ ಧ್ವನಿಯಾದವರು Janashakthi Media

 

Donate Janashakthi Media

Leave a Reply

Your email address will not be published. Required fields are marked *