ಮಧ್ಯಪ್ರದೇಶ: ಇವಿಎಂ ಯಂತ್ರಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ತಗುಲಿದೆ.ಲೋಕಸಭಾ ಚುನಾವಣೆಯ ಮತದಾನ ಮುಗಿದ ನಂತರ ಬೇತುಲ್ ಜಿಲ್ಲೆಯ ಗೋಲಾ ಗ್ರಾಮದ ಬಳಿ ಕಳೆದ ರಾತ್ರಿ ಇವಿಎಂ ಯಂತ್ರಗಳನ್ನು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ತಗುಲಿರುವ ಘಟನೆ ಸಂಭವಿಸಿದ್ದು, ಯಾವುದೇ ಮತಗಟ್ಟೆ ಸಿಬ್ಬಂದಿ ಹಾಗೂ ಬಸ್ ಚಾಲಕನಿಗೆ ಗಾಯಗಳಾಗಿಲ್ಲ. ಬದಲಿಗೆ ಇವಿಎಂ ಯಂತ್ರಗಳಿಗೆ ಹಾನಿಯಾಗಿದೆ.
ಬಸ್‌ನ ಮುಂಭಾಗದಲ್ಲಿ ಚಿಲಕ ಹಾಕಿದ್ದ ಕಾರಣ ಹಿಂಬಾಗಿಲು ಮತ್ತು ಕಿಟಕಿ ಒಡೆದು ಬಸ್‌ನಿಂದ ಸಿಬ್ಬಂದಿಗಳು ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ಇದನ್ನೂ ಓದಿ: ಕರ್ನಾಟಕದ ಅಂತಿಮ ಹಂತದಲ್ಲಿ 70.41% ಮತದಾನ ದಾಖಲು
ಬೂತ್ ನಂ 275, 276, 277, 278, 279 280 ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗಳಿಗೆ ಹಾನಿಯಾಗಿದೆ. ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿತು. ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಈ ವೇಳೆ ಬಸ್‌ನಲ್ಲಿ ಆರು ಮತಗಟ್ಟೆಗಳ ಇವಿಎಗಳು ಇದ್ದವು, ಅವುಗಳಲ್ಲಿ ನಾಲ್ಕಕ್ಕೆ ಹಾನಿಯಾಗಿದೆ. ಎರಡು ಸುರಕ್ಷಿತವಾಗಿದೆ. ಪರಿಣಾಮ ನಾಲ್ಕು ಇವಿಎಂಗಳಲ್ಲಿ ಕಂಟ್ರೋಲ್ ಯೂನಿಟ್ ಅಥವಾ ಬ್ಯಾಲೆಟ್ ಯೂನಿಟ್‌ಗೆ ಹಾನಿಯಾಗಿದೆ.
ಘಟನೆಯಿಂದ ಇವಿಎಂಗಳಲ್ಲಿ ದಾಖಲಾದ ಮತ ಎಣಿಕೆ ಮೇಲೆ ಪರಿಣಾಮ ಬೀರಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ಈ ಕುರಿತು ಚುನಾವಣಾ ಆಯೋಗಕ್ಕೆ ತಮ್ಮ ವರದಿಯನ್ನು ಕಳುಹಿಸಲಾಗುವುದು ಮತ್ತು ಹಾನಿಗೊಳಗಾದ ಮತಗಟ್ಟೆಗಳಲ್ಲಿ ಮರು ಮತದಾನದ ಬಗ್ಗೆ ಚುನಾವಣಾ ಸಂಸ್ಥೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಬೇತುಲ್ ಲೋಕಸಭಾ ಕ್ಷೇತ್ರದಲ್ಲಿ ಶೇ.72.65ರಷ್ಟು ಮತದಾನವಾಗಿತ್ತು ಎಂದು ಚುನಾವಣಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ನೋಡಿ: ಕಲಬುರ್ಗಿ ಲೋಕಸಭಾ ಕ್ಷೇತ್ರ : ಖರ್ಗೆ ವರ್ಚಸ್ಸಿನ ಮುಂದೆ ಮಂಕಾದ ಮೋದಿ ಗ್ಯಾರಂಟಿ Janashakthi Media