ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರವಾದಂತಹ ಅಪಘಾತ ಸಂಭವಿಸಿದ್ದು ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಬೈಕಿಗೆ ವೇಗವಾಗಿ ಬಂದ ಒಂದು ಸಾರಿಗೆ ಬಸ್ ಗುದ್ದಿ ಬೈಕ್ ನಲ್ಲಿ ಚಲಿಸುತ್ತಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಾದಗಿರಿ
ತಿಂಥಣಿ ಕಡೆಗೆ ಹೊರಟಿದ್ದ ಬೈಕಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಡಿಕ್ಕಿ ಹೊಡೆದ ಪರಿಣಾಮ ಆಂಜನೇಯ (35) ಪತ್ನಿ ಗಂಗಮ್ಮ (28) ಹಾಗೂ ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರೆ ನಮ್ಮ ನಿರ್ಧಾರ ಪ್ರಕಟ : ಶಾಸಕ ಯತ್ನಾಳ್
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ನೋಡಿ: ಬಹುರೂಪಿ | ಆದಿವಾಸಿ ಸಮುದಾಯದ ವರ್ತಮಾನದ ತಲ್ಲಣಗಳು Janashakthi Media