ಕೋಲಾರ : ವಿದ್ಯಾರ್ಥಿಗಳಿಗಳಿಗೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಎಸ್ಎಫ್ಐ ತಾಲೂಕು ಸಮಿತಿಯಿಂದ ನಗರದ ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಉದ್ದೇಶಿಸಿ ಎಸ್ ಎಫ್ ಐ ರಾಜ್ಯ ಕಾರ್ಯದರ್ಶಿ ವಾಸುದೇವಾರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಹತ್ತಾರು ಸಾವಿರ ವಿದ್ಯಾರ್ಥಿಗಳು ಪ್ರತಿದಿನ ವಿದ್ಯಾಭ್ಯಾಸದ ಉದ್ದೇಶದಿಂದ ಗ್ರಾಮೀಣ ಪ್ರದೇಶದಿಂದ ತಾಲ್ಲೂಕು ಕೇಂದ್ರಕ್ಕೆ ಬಂದು ನಂತರ ಜಿಲ್ಲಾ ಕೇಂದ್ರಕ್ಕೆ ಬರುತ್ತಾರೆ ವಿಧ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾಕಾಲೇಜುಗಳಿಗೆ ಹಾಜರಾಗದೇ ಸಾಕಷ್ಟು ಸಮಸ್ಯೆಗಳು ಎದುರಿಸಬೇಕಾಗಿದೆ ಇತಂಹ ಸಂದರ್ಭದಲ್ಲಿ ಸಾರಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ದೇಶದಲ್ಲಿ ಕೋವಿಡ್-19 ನಿಂದ ಗ್ರಾಮೀಣ ಪ್ರದೇಶದ ಸಾರಿಗೆಯನ್ನು ನಿಲ್ಲಿಸಲಾಗಿತ್ತು ಜನವರಿಯಿಂದ ಶಾಲಾಕಾಲೇಜುಗಳನ್ನು ಸರ್ಕಾರ ಪ್ರಾರಂಭಿಸಿದ್ದು ತರಗತಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗಿದೆ ಸಾರಿಗೆ ಇಲಾಖೆ ಈ ಕೊರೋನಾ ಪೂರ್ವದಲ್ಲಿ ಇದ್ದ ರೀತಿಯ ಸಾರಿಗೆಯನ್ನು ಸಂಪೂರ್ಣ ಪ್ರಮಾಣದಲ್ಲಿ ಪುನರ್ ಪ್ರಾರಂಭಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರಿಂದ ಪ್ರತಿನಿತ್ಯ ಜಿಲ್ಲಾ ಕೇಂದ್ರಕ್ಕೆ ಬರುವ ಹತ್ತಾರು ಸಾವಿರ ವಿದ್ಯಾರ್ಥಿಗಳು, ನೌಕರರು, ಉದ್ಯೋಗಿಗಳು, ರೋಗಿಗಳು, ಸಾರ್ವಜನಿಕರಿಗೆ ಬಸ್ ಸೌಲಭ್ಯ ಇಲ್ಲದೇ ತೊಂದರೆಯಾಗುತ್ತಾ ಇದೆ ಎಂದರು.
ಎಸ್ ಎಫ್ ಐ ಜಿಲ್ಲಾ ಸಹ ಕಾರ್ಯದರ್ಶಿ ಅಂಕಿತಾ ಮಾತನಾಡಿ, ವಿದ್ಯಾರ್ಥಿಗಳು ತರಗತಿಗಳ ಸಮಯಕ್ಕೆ ಸರಿಯಾಗಿ ಹಾಜರಾಗಲು ಸಾಧ್ಯವಾಗದೆ ಪ್ರತಿನಿತ್ಯ ಕಾಲೇಜು ಆಡಳಿತ ಮಂಡಳಿಯಿಂದ ತರಗತಿಗಳನ್ನು ಬಹಿಷ್ಕಾರ ಶಿಕ್ಷೆಗೆ ಒಳಗಾಗುತ್ತಿದ್ದಾರೆ ಇದರಿಂದ ಬಡ ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೀವ್ರ ಹಿನ್ನಡೆಯಾಗುತ್ತದೆ ಇನ್ನು ಮುಂದಿನ ತಿಂಗಳು ಹಲವು ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಸಹ ಪ್ರಾರಂಭವಾಗಲಿವೆ ಆದ್ದರಿಂದ ಈ ಸಮಸ್ಯೆಯ ಗಂಭೀರತೆಯನ್ನು ಅರಿತು ಸಾರಿಗೆ ಇಲಾಖೆ ಎಲ್ಲಾ ಗ್ರಾಮಗಳಿಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಅಗತ್ಯಕ್ಕೆ ತಕ್ಕಂತೆ ಬಸ್ ಸಂಪರ್ಕವನ್ನು ಪ್ರಾರಂಭಿಸಬೇಕು ಎಂದರು.
ಪ್ರತಿಭಟನೆಯ ನೇತೃತ್ವವನ್ನು ಎಸ್ ಎಫ್ ಐ ಜಿಲ್ಲಾ ಮುಖಂಡರಾದ ಶ್ರೀಕಾಂತ್,ಆನಂದ್, ಅಂಕಿತಾ,ವಿಧ್ಯಾರ್ಥಿಗಳಾದ ಭಾವನ, ವಿಧ್ಯಾ, ಕೀರ್ತನಾ, ಮಮತಾ, ಸುಷ್ಮಿತಾ, ದಿಷಾ ಅನುಷಾ ಮುಂತಾದವರು ಇದ್ದರು