ಹುಬ್ಬಳ್ಳಿ: ʼಡೀಸೆಲ್, ಪೆಟ್ರೋಲ್ ದರ ಹೆಚ್ಚಳವಾದಾಗ ಎಲ್ಲ ವಸ್ತುಗಳೂ ದುಬಾರಿ ಆಗುತ್ತವೆ. ಹೀಗಾಗಿ ಬಸ್ ಟಿಕೆಟ್ ದರವನ್ನು ಸಹ ಏರಿಕೆ ಮಾಡಲಾಗಿದೆ. ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣʼ ಎಂದು ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ 1 ಲೀಟರ್ ಡೀಸೆಲ್ ಅನ್ನು 730ರಿಂದ 740ಕ್ಕೆ ಕೊಡಬಹುದು. ರಿಲಯನ್ಸ್ ಪೆಟ್ರೋಲ್ ಬಂಕ್ ಉಳಿಯಬೇಕು ಎನ್ನುವ ಉದ್ದೇಶದಿಂದ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ ಮಾಡುತ್ತಿಲ್ಲ’ ಎಂದು ಟೀಕಿಸಿದರು.
ಇದನ್ನೂ ಓದಿ : ಸಚಿವ ಕುಮಾರಸ್ವಾಮಿ ಆರೋಪ ಗಾಳಿಲಿ ಗುಂಡು ಹಾರಿಸಿದಂತಿದೆ: ಸಿಎಂ ಸಿದ್ದರಾಮಯ್ಯ
‘ದಿನಕ್ಕೆ 1.16 ಕೋಟಿ ಜನರು ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದರಿಂದ 5,300 ಹೊಸ ಬಸ್ ಖರೀದಿಸಲಾಗಿದೆ. 8 ಸಾವಿರ ಸಾರಿಗೆ ಸಿಬ್ಬಂದಿ ನೇಮಕಕ್ಕೆ ಹಣಕಾಸು ಇಲಾಖೆ ಅನುಮತಿ ನೀಡಿದೆ.
ಈಗಾಗಲೇ 4ರಿಂದ 5 ಸಾವಿರ ಜನರನ್ನು ನೇಮಕ ಮಾಡಿಕೊಳ್ಳಲಾಗಿದೆ. ಹೀಗಾಗಿ ಬಸ್ ಟಿಕೆಟ್ ದರ ಏರಿಕೆ ಅನಿವಾರ್ಯವಾಗಿದೆ’ ಎಂದು ಸಚಿವ ಸಂತೋಷ್ ಲಾಡ್ ಬಸ್ ಟಿಕೆಟ್ ದರ ಹೆಚ್ಚಳದ ಕುರಿತು ಮಾತನಾಡಿದ್ದಾರೆ.
ಇದನ್ನೂ ನೋಡಿ : 1000 ದಿನಗಳನ್ನು ಪೂರೈಸಿ ಇಂದಿಗೂ ಮುಂದುವರಿದ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟದ ಆಳ ಅಗಲ…