ಸಿಎಂ ಭೇಟಿ : ಅಂಜನಾದ್ರಿಯಲ್ಲಿ ವ್ಯಾಪಾರ ಅಂಗಡಿಗಳು ಬಂದ್‌

ಆಂಜನಾದ್ರಿ (ಗಂಗಾವತಿ): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಇಲ್ಲಿನ ಅಂಜನಾದ್ರಿ ಬೆಟ್ಟಕ್ಕೆ ವಿವಿಧ ಕಾರ್ಯಕ್ರಮಗಳ ನಿಮಿತ್ತ ಭೇಟಿ ನೀಡಿದ್ದರಿಂದ ಬೆಟ್ಟದ ಕೆಳಗಿನ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು.

ಅಂಜನಾದ್ರಿ ಬೆಟ್ಟದ ಕೆಳಗೆ ಎರಡೂ ಬದಿಗಳಲ್ಲಿ ಪೂಜಾ ಸಾಮಗ್ರಿಗಳ, ತಂಪು ಪಾನೀಯ ಮಾರುವ ಅಂಗಡಿಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಅಲ್ಲಿಗೆ ಬರುವ ಸಾಕಷ್ಟು ಸ್ಥಳೀಯರು ಮತ್ತು ಪ್ರವಾಸಿಗರಿಗೆ ಈ ಅಂಗಡಿಗಳೇ ಆಸರೆಯಾಗಿದ್ದವು. ಇಂದು ಅಂಗಡಿಗಳು ಮುಚ್ಚಿದ್ದರಿಂದ ಬಿಸಿಲಿನಲ್ಲಿ ಪ್ರವಾಸಿಗರು ಪರದಾಡುವಂತಾಯಿತು ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ ಅವರಿಗೆ ಸಾಂಸ್ಕೃತಿಕ ಕಲಾ ತಂಡಗಳ ಮೂಲಕ ಪೂರ್ಣಕುಂಭ ಸ್ವಾಗತ‌ ನೀಡಲಾಯಿತು. ಬಳಿಕ ಬೆಟ್ಟದ ಪಕ್ಕದ ಜಮೀನಿನಲ್ಲಿ ಪ್ರವಾಸೋದ್ಯಮ ಇಲಾಖೆ, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ಜಿಲ್ಲಾಡಳಿತ ಸಹಯೋಗದಲ್ಲಿ ನಡೆದ ವೇದಿಕೆಯ ಸಮಾರಂಭದಲ್ಲಿ ಪ್ರವಾಸಿ ಮಂದಿರ, ಶಾಪಿಂಗ್ ಕಾಂಪ್ಲೆಕ್ಸ್, ಪ್ರದಕ್ಷಣ ಪಥ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ಇದನ್ನೂ ಓದಿ : ಅಂಜನಾದ್ರಿ ಬೆಟ್ಟದಲ್ಲಿ ಅನ್ಯಧರ್ಮದವರ ವ್ಯಾಪಾರಕ್ಕೆ ತೊಡಕಾಗಿರುವ ಹಿಂದುತ್ವ ಸಂಘಟನೆ ವರ್ತನೆಗೆ ಸಿಪಿಐ(ಎಂ) ವಿರೋಧ

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಖಾತೆ ಸಚಿವ ಹಾಲಪ್ಪ ಆಚಾರ್, ತೋಟಗಾರಿಕಾ ಸಚಿವ ಕೆ. ಮುನಿರತ್ನ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಅಮರೇಗೌಡ ಪಾಟೀಲ ಬಯ್ಯಾಪುರ, ಬಸವರಾಜ ಧಢೇಸೂಗೂರು, ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು, ವಿಜಯನಗರ ಜಿಲ್ಲಾಧಿಕಾರಿ ವೆಂಕಟೇಶ, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ ಇದ್ದರು.

 

Donate Janashakthi Media

Leave a Reply

Your email address will not be published. Required fields are marked *