ಬೆಂಗಳೂರು: ಬಸ್ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತರವಾದ ವರದಿಗಳನ್ನು ಆಧರಿಸಿ ಸರ್ಕಾರ ಕ್ರಮಕೈಗೊಂಡಿದೆ.
ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಆದೇಶದ ಮೇರೆಗೆ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್ ತಿಂಗಳಲ್ಲಿ ವಿಶೇಷ ಅಭಿಯಾನ ನಡೆಸಿದ್ದಾರೆ.
ಇದನ್ನು ಓದಿ : ನೀಟ್ ವ್ಯವಸ್ಥೆ ಕೊನೆಯಾದರೆ ಮಾತ್ರ ರಾಜ್ಯದ ಮಕ್ಕಳಿಗೆ ನ್ಯಾಯ ಸಿಗುತ್ತದೆ: ಮೋಹನ್ ದಾಸರಿ
ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿದೆ ಮುಂದಿನ ದಿನಗಳಲ್ಲಿ ಪುನರ್ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮಾಧ್ಯಮ ಪ್ರಕಟಣೆ ಹೇಳಿದೆ.
ಇದನ್ನು ನೋಡಿ : ನೀಟ್ “ಕಾಸಿದ್ದವರ ಮೆಡಿಕಲ್ “ಮೀಸಲಾತಿಯೆ? ನೀಟಾಗದ ಪರೀಕ್ಷೆಯ ಹೊಣೆ ಹೊರುವುದೆ ಕೇಂದ್ರ ಸರ್ಕಾರ? J#neet2024