ಸಿಎಎ ಜಾರಿ: ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ

ಉಡುಪಿ : ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಿಎಎ ಜಾರಿ

ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ , ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ.ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು. ಸಿಎಎ ಜಾರಿ

ಇದನ್ನು ಓದಿ : ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ

ಪಕ್ಷಕ್ಕೆ ಬಲ :ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು. ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿರುವ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಮಾತನಾಡಿದ್ದಾರೆ.

ಇದನ್ನು ನೋಡಿ : ಅಚ್ಚೆದಿನದಿಂದ… ಅಮೃತ ಕಾಲದವರೆಗೆ…! ಚುನಾವಣಾ ಬಾಂಡ್ ಮೂಲಕ ಖಾವೋ, ಖಾನೆ ಮಾಡಿದ ಬಿಜೆಪಿ – ಗುರುರಾಜ ದೇಸಾಯಿ

Donate Janashakthi Media

Leave a Reply

Your email address will not be published. Required fields are marked *