ತಮಿಳುನಾಡಿಗೆ 3,500 ಸಾವಿರ ಕ್ಯೂಸೆಕ್ ನೀರು: ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ತಮಿಳುನಾಡಿಗೆ  ನಿತ್ಯ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದು, ಇದರ ನಡುವೆ ರಾಜ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತುತ ಬಿಡುಗಡೆ ಮಾಡುತ್ತಿರುವ ಮಾದರಿಯಲ್ಲೇ ಸೆ.26ರವರೆಗೆ ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಕಾವೇರಿ ನದಿ ನೀರು ಸಂಬಂಧ ಸುಪ್ರೀಂ ಕೋರ್ಟ್​ನಲ್ಲಿ ಆಗಿರುವ ವಿಚಾರಣೆಯನ್ನು ಎಎಜಿ ಸಂಪುಟ ಸಭೆಯಲ್ಲಿ ವಿವರಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಲಾಗುವುದು. ಸೆ.26ರವರೆಗೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗುವುದು. 8000 ಕ್ಯುಸೆಕ್ಸ್ ಒಳಹರಿವು ಇದೆ. ಈಗಾಗಲೇ 3,000-3,500 ಕ್ಯುಸೆಕ್ಸ್ ನೀರು ಹರಿದು ಹೋಗುತ್ತಿದೆ. ಸೆ.26 ತನಕ ನೀರು ಬಿಡಲಾಗುತ್ತದೆ. ನಾವು ರೈತರ ಹಿತರಕ್ಷಣೆಯನ್ನೂ ಮಾಡುತ್ತೇವೆ. ಕುಡಿಯುವ ನೀರಿನ ರಕ್ಷಣೆಯನ್ನು ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಜಾತಿನಿಂದನೆ ಆರೋಪ: ಮನನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣು

ತಮಿಳುನಾಡು ಮೇಕೆದಾಟು ಯೋಜನೆಯನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್​ನಲ್ಲಿ ಆಕ್ಷೇಪ ಸಲ್ಲಿಸಿದೆ. ಆದರೆ, ಗುರುವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೌಖಿಕವಾಗಿ ಮೇಕೆದಾಟಿಗೆ ಏಕೆ ಅಡ್ಡ ಬರುತ್ತೀರ. ಕರ್ನಾಟಕ ಅವರ ಭೂಮಿಯಲ್ಲಿ ಯೋಜನೆಯನ್ನು ಮಾಡುತ್ತಿದೆ ಎಂದು ತಮಿಳುನಾಡಿಗೆ ತಾಕೀತು ಮಾಡಿದ್ದಾರೆ.

ಹಾಗಾಗಿ ಮೇಕೆದಾಟು ಯೋಜನೆ ಮುಂದುವರಿಸಲು ತೀರ್ಮಾನಿಸಿದ್ದೇವೆ. ಈ ಸಂಬಂಧ ಕೇಂದ್ರ ಪರಿಸರ ಇಲಾಖೆಯ ಅನುಮೋದನೆ ಪಡೆಯುವುದು ಸೇರಿ ಬೇಕಾದ ಇತರೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.

 

ವಿಡಿಯೋ ನೋಡಿ:ದೇವದಾಸಿ ಪದ್ದತಿ ಹುಟ್ಟಿದ್ದು ಸನಾತನ ಧರ್ಮದಿಂದ – ಬಿ. ಮಾಳಮ್ಮ Janashakthi Media

Donate Janashakthi Media

Leave a Reply

Your email address will not be published. Required fields are marked *