ಕನ್ನಡಿಗರಿಗೆ ರಾಜ್ಯದಲ್ಲೇ ಆಗುತ್ತಿರುವ ಅನ್ಯಾಯದ ವಿರುದ್ಧ ಚಳವಳಿಗೆ ಕರೆ: ಟಿ. ಎ. ನಾರಾಯಣಗೌಡರು

ಬೆಂಗಳೂರು:  ಕನ್ನಡಿಗರಿಗೆ ಕರ್ನಾಟಕದಲ್ಲೇ ಆಗುತ್ತಿರುವ ಅನ್ಯಾಯದ ವಿರುದ್ಧ ದೊಡ್ಡ ಚಳವಳಿಗೆ ಕರೆ ನೀಡಿದ್ದಾರೆ. ಮೂರು ಪ್ರಮುಖ ಬೇಡಿಕೆಗಳನ್ನಿಟ್ಟುಕೊಂಡು ಚಳವಳಿ ನಡೆಸಲು ನಾರಾಯಣಗೌಡರು ಮುಂದಾಗಿದ್ದಾರೆ. ಅನ್ಯಾಯ
ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. ಎಲ್ಲರ ಬದುಕು ಎಳ್ಳು, ಬೆಲ್ಲದ ಸಿಹಿಯಲ್ಲಿ ಅರಳಿಕೊಳ್ಳಲಿ ಎಂದು ಹಾರೈಸುತ್ತೇನೆ. ಕನ್ನಡಿಗರೂ ಒಂದು ಸಂಕ್ರಮಣದ ಕಾಲಘಟ್ಟದಲ್ಲಿ ಹಾದುಹೋಗುತ್ತಿದ್ದೇವೆ. ಈ ಸಂದರ್ಭದಲ್ಲಿ ನಾವು ಎಚ್ಚೆತ್ತುಕೊಂಡು ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿದೆ ಎಂದು ನಾರಾಯಣಗೌಡರು ಹೇಳಿದ್ದಾರೆ. ಅನ್ಯಾಯ

ಈ ಹಿನ್ನೆಲೆಯಲ್ಲಿ, ಮಕರ ಸಂಕ್ರಾಂತಿಯ ಈ ಸಂದರ್ಭದಲ್ಲಿ ರಕ್ಷಣಾ ವೇದಿಕೆಯ ನನ್ನೆಲ್ಲ ಕಾರ್ಯಕರ್ತರಿಗೆ ದೊಡ್ಡ ಸವಾಲೊಂದನ್ನು ನೀಡುತ್ತಿದ್ದೇನೆ. ಮುಂದಿನ ಸಂಕ್ರಾಂತಿಯೊಳಗೆ ಮೂರು ಮುಖ್ಯ ವಿಷಯಗಳು ನಿಮ್ಮ ಚಳವಳಿಯ ವಿಷಯವಾಗಬೇಕು. ಈ ಮೂರು ಹಕ್ಕೊತ್ತಾಯಗಳು ಈಡೇರುವವರೆಗೆ ನೀವು ವಿರಮಿಸಬಾರದು. ಈ‌ ಚಳವಳಿಯಿಂದ ಏನೇ ಸಮಸ್ಯೆ ಬಂದರೂ ಧೃತಿಗೆಡದೆ, ಕನ್ನಡಿಗರ ಬಹುಕಾಲದ ಬೇಡಿಕೆಗಳು ಈಡೇರುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಗೃಹಸಚಿವ ಹುದ್ದೆಯ ಘನತೆ ಕಾಪಾಡಿ: ಅಮಿತ್‌ ಶಾಗೆ ಶರದ್‌ ಪವಾರ್

ಮೊದಲನೆಯದು ಕರ್ನಾಟಕದಲ್ಲಿ ಮಾರಾಟವಾಗುವ ಅಥವಾ ಬಳಕೆಯಾಗುವ ಎಲ್ಲ ಬಗೆಯ ಉತ್ಪನ್ನಗಳ ಏಜೆನ್ಸಿಗಳು ಪರಭಾಷಿಕರ ಪಾಲಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಸಾರಾಸಗಟಾಗಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಮತ್ತು ಅಪಮಾನ ಎಂದು ದೂರಿದ್ದಾರೆ. ಹೀಗಾಗಿ ಎಲ್ಲ ಉತ್ಪನ್ನಗಳ ಏಜೆನ್ಸಿಗಳು ಕನ್ನಡಿಗರಿಗೇ ಸಿಗಬೇಕು. ಅಥವಾ ಈ ಏಜೆನ್ಸಿಗಳಲ್ಲಿ ಕನ್ನಡಿಗರು ಪಾಲುದಾರರಾಗಿರಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಮಾರಾಟವಾಗುವ, ಬಳಕೆಯಾಗುವ ಎಲ್ಲ ಬಗೆಯ ಉತ್ಪನ್ನಗಳ ಮೇಲೆ ಶೇ 60ರಷ್ಟು ಬರಹಗಳು ಕನ್ನಡದಲ್ಲಿಯೇ ಇರಬೇಕು. ತಾವು ಬಳಕೆ ಮಾಡುವ ವಸ್ತುಗಳ ಹೆಸರೇನು? ಪ್ರಮಾಣವೇನು? ಅವುಗಳ ತಯಾರಿಕೆಗೆ ಏನನ್ನು ಬಳಸಲಾಗಿದೆ ಎಂಬ ವಿಷಯಗಳು ಕನ್ನಡಿಗರಿಗೆ ಕಡ್ಡಾಯವಾಗಿ ಗೊತ್ತಾಗಬೇಕು ಎಂದಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ ಎಲ್ಲ ಬಗೆಯ ರಾಷ್ಟ್ರೀಯ, ಖಾಸಗಿ, ಗ್ರಾಮೀಣ, ಸಹಕಾರಿ ಬ್ಯಾಂಕ್‌ಗಳು, ಫೈನಾನ್ಸ್‌ಗಳು, ಚಿನ್ನದ ಅಡಮಾನ ಸಂಸ್ಥೆಗಳು, ಜೀವವಿಮಾ ಸಂಸ್ಥೆಗಳು, ಆರೋಗ್ಯ ವಿಮಾ ಸಂಸ್ಥೆಗಳು ಮತ್ತು ಇತರ ಯಾವುದೇ ಸ್ವರೂಪದ ಹಣಕಾಸು ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ‌ 100ರಷ್ಟು ಹುದ್ದೆಗಳು ಮತ್ತು ಇತರೆ ಹುದ್ದೆಗಳಲ್ಲಿ ಶೇ. 60ರಷ್ಟು ಹುದ್ದೆಗಳು ಕನ್ನಡಿಗರಿಗೆ ನೀಡಬೇಕು. ಈ ಎಲ್ಲ ಸಂಸ್ಥೆಗಳು ಬಳಸುವ, ಗ್ರಾಹಕರಿಗೆ ನೀಡುವ ಎಲ್ಲ ದಾಖಲೆಗಳು ಕಡ್ಡಾಯವಾಗಿ ಕನ್ನಡದಲ್ಲಿರಬೇಕು ಎಂದು ನಾರಾಯಣಗೌಡರು ಒತ್ತಾಯಿಸಿದ್ದಾರೆ.

ಈ ಮೂರು ಹಕ್ಕೊತ್ತಾಯಗಳು ಈಡೇರಲು ಗ್ರಾಮಮಟ್ಟದಿಂದ, ರಾಜಧಾನಿಯವರೆಗೆ ದೊಡ್ಡ ಮಟ್ಟದ ಚಳವಳಿ ಹಮ್ಮಿಕೊಳ್ಳಲು ನನ್ನ ಕಾರ್ಯಕರ್ತರಿಗೆ ಕರೆ ನೀಡುತ್ತೇನೆ. ಕನ್ನಡದ ಸಮಸ್ತ ಜನತೆ ಈ ಚಳವಳಿಯನ್ನು ಬೆಂಬಲಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ. 2023ರ ಡಿಸೆಂಬರ್ 27ರಂದು ಕರವೇ ಸಂಘಟಿಸಿದ ಐತಿಹಾಸಿಕ ನಾಮಫಲಕ ಚಳವಳಿಯನ್ನು ಯಶಸ್ವಿಗೊಳಿಸಿದ ಹಾಗೆ ಕರವೇ ಕಟ್ಟಾಳುಗಳು ಜೀವದ ಹಂಗು ತೊರೆದು ಹೋರಾಡಿ, ಈ ಹೋರಾಟವನ್ನೂ ಯಶಸ್ವಿಗೊಳಿಸುತ್ತಾರೆ ಎಂಬ ವಿಶ್ವಾಸ ನನ್ನದು ಎಂದಿದ್ದಾರೆ.

ನಮ್ಮ ಈ ಮೂರು ಹಕ್ಕೊತ್ತಾಯಗಳ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಸೂಕ್ತ ಕಾಯ್ದೆ ರೂಪಿಸಬೇಕು, ಶಾಸನಬದ್ಧವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸೋಣ. ಮುಂದಿನ ಮಕರ ಸಂಕ್ರಾಂತಿಯೊಳಗೆ ಈ ಹಕ್ಕೊತ್ತಾಯಗಳು ಈಡೇರುವಂತೆ ನೋಡಿಕೊಳ್ಳೋಣ ಎಂದು ಕರೆ ಕೊಟ್ಟಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ‌ ಏರ್ಪಡಿಸಿದ್ದ ಕರ್ನಾಟಕ ಹೆಸರು ನಾಮಕರಣದ ನೆನಪಿನ “ಹೆಸರಾಯಿತು ಕರ್ನಾಟಕ” ಸಮಾವೇಶದಲ್ಲಿ ನನ್ನ ಎಲ್ಲ ಮುಖಂಡರಿಗೆ ಕನ್ನಡಕ್ಕಾಗಿ, ಕನ್ನಡಿಗರ ಏಳಿಗೆಗಾಗಿ, ಕರ್ನಾಟಕದ ರಕ್ಷಣೆಗಾಗಿ ಎಂಥದ್ದೇ ಕಷ್ಟ ಬಂದರೂ ಎದೆಗುಂದದೆ ಎದುರಿಸುತ್ತೇವೆ ಎಂಬ ಪ್ರತಿಜ್ಞೆಯನ್ನು ಬೋಧಿಸಿದ್ದೆ. ಆ ಪ್ರತಿಜ್ಞೆಯಂತೆ ಎಲ್ಲರೂ ನಡೆಯೋಣ ಎಂದು ಹೇಳಿದ್ದಾರೆ.

ಇದನ್ನೂ ನೋಡಿ: ‘ದಲಿತ’ ಪದ ಅಸ್ಮಿತೆಯೋ? ಅವಮಾನವೋ? Janashakthi Media

Donate Janashakthi Media

Leave a Reply

Your email address will not be published. Required fields are marked *