ಜ. 5ರಿಂದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ: ಸಿಎಂ ಸಿದ್ದರಾಮಯ್ಯ

Please follow and like us:
ನವದೆಹಲಿ: ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಲಾಗಿದ್ದು, ಜನವರಿ 5ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಡಿಸೆಂಬರ್‌ 27ರಂದು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು ಎಂದರು.

ಇದನ್ನೂ ಓದಿ: ನವದೆಹಲಿ |ಮಾಜಿ ಶಾಸಕ ಅತ್ಯಾಚಾರಿ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು : ದೆಹಲಿ ಕೋರ್ಟ್‌ ಮುಂದೆ ಪ್ರತಿಭಟನೆ

ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ನೋಡಿ: ‘ಮರ್ಯಾದೆಗೇಡು ಹತ್ಯೆ’ ಮರ್ಯಾದೆ ಉಳಿಸಿಕೊಳ್ಳಲಿ ಸರ್ಕಾರ!? ಕೆ.ಎಸ್.ವಿಮಲಾ, ಗುರುರಾಜ ದೇಸಾಯಿ ಮಾತುಕತೆ Janashakthi

Please follow and like us:
Donate Janashakthi Media

Leave a Reply

Your email address will not be published. Required fields are marked *