ಬೆಂಗಳೂರು: ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದೆವು ಆ ಮಾತಿಗೆ ನಾವು ಬದ್ಧರಾಗಿದ್ದೇವೆ. ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ:ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಳ್ಳಬೇಕು : ಡಿ.ಕೆ.ಶಿವಕುಮಾರ್
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಕರ್ನಾಟಕದಲ್ಲೇ ಮೊದಲು ಎನ್‌ಇಪಿ ಜಾರಿ ಮಾಡುವ ತರಾತುರಿ ಏನಿದೆ? ಗುಜರಾತ, ಉತ್ತರ ಪ್ರದೇಶದಲ್ಲಿ ಏಕೆ ಎನ್‌ಇಪಿ ಜಾರಿ ಮಾಡಿಲ್ಲ ಎಂದು ಪ್ರಶ್ನೆ ಕೇಳಿದ್ದಾರೆ.
ಕರ್ನಾಟಕದಲ್ಲಿರುವ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿಯಾಗಿದೆ ಅದರಿಂದಾಗಿಯೇ ಇಂದು ಬೆಂಗಳೂರು ಐಟಿ ರಾಜಧಾನಿಯಾಗಿರುವುದು ಎಂದರು. ರಾಜ್ಯದಲ್ಲಿ ಅದೆಷ್ಟೋ ಜನ ವಿದೇಶದಲ್ಲಿ ಒಳ್ಳೆ ಸ್ಥಾನದಲ್ಲಿದ್ದಾರೆ. ಅದಕ್ಕೂ ನಮ್ಮ ಶಿಕ್ಷಣ ವ್ಯವಸ್ಥೆ ಕಾರಣ ಎಂದಿದ್ದಾರೆ.
ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದೆವು ಆ ಮಾತಿಗೆ ನಾವು ಬದ್ಧರಾಗಿದ್ದೇವೆ. ಕರ್ನಾಟಕದಲ್ಲೇ ಮೊದಲು ಎನ್‌ಇಪಿ ಜಾರಿ ಮಾಡುವ ತರಾತುರಿ ಏನಿದೆ? ಗುಜರಾತ್, ಉತ್ತರ ಪ್ರದೇಶದಲ್ಲಿ ಏಕೆ ಎನ್‌ಇಪಿ ಜಾರಿ ಮಾಡಿಲ್ಲ? ಕರ್ನಾಟಕದಲ್ಲಿರುವ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿಯಾಗಿದೆ.…
— DK Shivakumar (@DKShivakumar) August 18, 2023