ರಾಷ್ಟ್ರೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಕೋವಿಡ್-19 ಸಾಂಕ್ರಮಿಕ ರೋಗವು ಇಡೀ ದೇಶಕ್ಕೆ ಬಿಕ್ಕಟ್ಟಿನ ಸಂದರ್ಭ ಎದುರಾಗಿರುವ ಈ ಸಂದರ್ಭದಲ್ಲಿ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಪಪಡಿಸಿದೆ.

ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ಕೋವಿಡ್ ಸಾಂಕ್ರಾಮಿಕ ಸಂಬಂಧ ದಾಖಲಾಗಿರುವ ಅರ್ಜಿಗಳ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್‌, ನ್ಯಾ.ಎಲ್.ಎನ್.ರಾವ್ ಮತ್ತು ನ್ಯಾ.ರವೀಂದ್ರ ಎಸ್ ಭಟ್ ನೇತೃತ್ವದ ತ್ರಿಸದಸ್ಯ ಪೀಠವು ‘ಸುಪ್ರೀಂ ಕೋರ್ಟ್ ವ್ಯವಹರಿಸಬೇಕಾದ ಕೆಲವು ರಾಷ್ಟ್ರೀಯ ಸಮಸ್ಯೆಗಳಿವೆ. ಆದರೆ ರಾಷ್ಟ್ರೀಯ ಬಿಕ್ಕಟ್ಟಿನ ಸಮಯದಲ್ಲಿ ಸುಪ್ರೀಂ ಕೋರ್ಟ್ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ. ಅಂತೆಯೇ ಹೈಕೋರ್ಟ್‌ಗಳು ವಿವಿಧ ರಾಜ್ಯಗಳಲ್ಲಿನ ಅರ್ಜಿಗಳನ್ನು ಆಲಿಸುವುದನ್ನು ತಡೆಯುವ ಉದ್ದೇಶವನ್ನು ಹೊಂದಿಲ್ಲ ಪೀಠ ಹೇಳಿದೆ.

ಇದನ್ನು ಓದಿ: ವೇದಾಂತ ಕಂಪೆನಿ ಆಕ್ಸಿಜನ್ ಘಟಕ ಮಾತ್ರ ಪ್ರಾರಂಭಿಸಲು ಸುಪ್ರೀಂ ಕೋರ್ಟ್ ಆದೇಶ

ರಾಷ್ಟ್ರೀಯ ವಿಷಯಗಳಿಗೆ ಸಂಬಂಧಿಸಿ ರಾಜ್ಯಗಳ ನಡುವೆ ಸಮನ್ವಯ ಸಾಧಿಸಲು ಸುಪ್ರೀಂಕೋರ್ಟ್‌ ಮಧ್ಯಪ್ರವೇಶಿಸಬೇಕಾಗುತ್ತದೆ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಅದೇ ರೀತಿಯಲ್ಲಿ ‘ನಾವು ಹೈಕೋರ್ಟ್‌ಗಳಲ್ಲಿನ ವಿಚಾರಣೆಯನ್ನು ತಡೆಯುತ್ತಿಲ್ಲ. ನಾವು ಪೂರಕ ಪಾತ್ರವನ್ನು ಮಾತ್ರ ವಹಿಸಲಿದ್ದೇವೆ. ಕೋವಿಡ್ ಸಾಂಕ್ರಾಮಿಕ‌ ಹರಡುವಿಕೆ ಸಂದರ್ಭದಲ್ಲಿ ತನ್ನ ವ್ಯಾಪ್ತಿಯಲ್ಲಿನ ಪ್ರಕರಣಗಳನ್ನು ನಿರ್ವಹಿಸುವ ಕಾರ್ಯಕ್ಷಮತೆ ಇದೆ ಮತ್ತು ಕೆಲ ಪ್ರಕರಣಗಳಲ್ಲಿ ಸರ್ವೋಚ್ಛ ನ್ಯಾಯಾಲಯದ ಮಧ್ಯ ಪ್ರವೇಶದ ಅಗತ್ಯತೆ ಕೂಡ ಇದೆ. ಪ್ರಾದೇಶಿಕ ಮಿತಿಗಳಿಂದಾಗಿ ಸಮಸ್ಯೆಗಳನ್ನು ಎದುರಿಸಲು ಹೈಕೋರ್ಟ್‌ಗಳಿಗೆ ಯಾವುದೇ ತೊಂದರೆ ಇದ್ದರೆ, ನಾವು ಸಹಾಯ ಮಾಡುತ್ತೇವೆ ಎಂದು ನ್ಯಾಯಪೀಠ ಭರವಸೆಯನ್ನು ನೀಡಿದೆ.

ಇದನ್ನು ಓದಿ: ಮತ ಎಣಿಕೆ ದಿನ ವಿಜಯೋತ್ಸವಕ್ಕೆ ಕಡಿವಾಣ: ಚುನಾವಣಾ ಆಯೋಗ

ಇನ್ನು ಕೋವಿಡ್ ಬಿಕ್ಕಟ್ಟಿನಲ್ಲಿ ಆಮ್ಲಜನಕ, ಔಷಧಿಗಳು, ಲಸಿಕೆಗಳು ಮತ್ತು ಇತರ ಸರಬರಾಜುಗಳ ಕುರಿತಂತೆ ಸುಪ್ರೀಂ ಕೋರ್ಟ್ ನಲ್ಲಿ ವಿವಿಧ ಅರ್ಜಿಗಳು ದಾಖಲಾಗಿವೆ. ಇಂತಹುದೇ ಅರ್ಜಿಗಳು ದೇಶದ ವಿವಿಧ ರಾಜ್ಯಗಳಲ್ಲಿನ ಹೈಕೋರ್ಟ್‌ಗಳಲ್ಲೂ ದಾಖಲಾಗುತ್ತಿದ್ದು, ಈ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಅಲ್ಲದೆ ಆಕ್ಸಿಜನ್, ಔಷಧಿಗಳು ಸೇರಿದಂತೆ ಅಗತ್ಯ ಪರಿಕರಗಳ ಸುಗಮ ಸರಬರಾಜು ಸಮಸ್ಯೆ ನೀಗಿಸಲು ರಾಷ್ಟ್ರೀಯ ಯೋಜನೆ ರೂಪಿಸಿ ಎಂದು ಸೂಚಿಸಿತ್ತು.

ದೇಶದಲ್ಲಿ ಕೋವಿಡ್‌ ಲಸಿಕೆಗಳಿಗೆ ಬೇರೆ ಬೇರೆ ದರಗಳನ್ನು ನಿಗದಿಪಡಿಸಿರುವ ಕ್ರಮವನ್ನು ಪ್ರಶ್ನಿಸಿ ಹಿರಿಯ ವಕೀಲ ವಿಕಾಸ್‌ ಸಿಂಗ್‌ ಅರ್ಜಿ ಸಲ್ಲಿಸಿದ್ದರು. ಇದರ ಒಬ್ಬೆ ಅನುಸರಿಸಿರುವ ಮಾನದಂಡ ಕುರಿತು ವಿವರಣೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತು.‌

ಆಮ್ಲಜನಕ ಹಾಗೂ ಲಸಿಕೆಯನ್ನು ರಾಜ್ಯಗಳಿಗೆ ವಿತರಣೆ ಮಾಡುವುದು ಹಾಗೂ ಇಡೀ ಪ್ರಕ್ರಿಯೆ ಮೇಲ್ವಿಚಾರಣೆಗೆ ಸಂಬಂಧಿಸಿದ ಮಾಹಿತಿಯನ್ನು ಸಲ್ಲಿಸುವಂತೆ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಈ ವಿಷಯದಲ್ಲಿ ನ್ಯಾಯಾಲಯಕ್ಕೆ ನೆರವಾಗಲು(ಅಮಿಕಸ್‌ ಕ್ಯೂರಿ) ವಕೀಲರಾದ ಜೈದೀಪ್‌ ಗುಪ್ತಾ ಹಾಗೂ ಮೀನಾಕ್ಷಿ ಅರೋರಾ ಅವರನ್ನು ಸುಪ್ರೀಂಕೋರ್ಟ್‌ ನೇಮಕ ಮಾಡಿತು.

Donate Janashakthi Media

Leave a Reply

Your email address will not be published. Required fields are marked *