ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 3,500 ರೂ. ದರ ಘೋಷಣೆಗೆ ಒತ್ತಾಯಿಸಿ ಕಬ್ಬು ಬೆಳೆಗಾರುರು ಕಳೆದ 8 ದಿನಗಳಿಂದ ಬೆಳಗಾವಿಯ ಗುರ್ಲಾಪುರ ಕ್ರಾಸ್ನಲ್ಲಿ ಧರಣಿ ನಡೆಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಚಿವರು ಅವರು ಸ್ಥಳಕ್ಕೆ ಭೇಟಿ ನೀಡಿದರು.ಪ್ರತಿಭಟನಾ ಸ್ಥಳಕ್ಕೆ ಬಂದ ಸಚಿವರು, ರೈತರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಎರಡು ದಿನ ಸಮಯಾವಕಾಶ ಕೊಡಿ ಎಂದು ಹೇಳಿದ್ದಾರೆ. ಬೆಳಗಾವಿ
ಇದನ್ನೂ ಓದಿ : ಕನ್ನಡ ಸಾಹಿತ್ಯ ಪರಿಷತ್‌ಗೆ ಆಡಳಿತಾಧಿಕಾರಿ ಮುಂದುವರಿಕೆ – ಹೈಕೋರ್ಟ್
ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ (Protest) ನಡೆಸುತ್ತಿರುವ ರೈತರ (Farmer) ಮನವೊಲಿಸಲು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಇಂದು ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ಸಚಿವರ ಕಾರಿನ ಮೇಲೆ ಚಪ್ಪಲಿ, ನೀರಿನ ಬಾಟಲ್ ಎಸೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಇದೇ ವೇಳೆ 8ನೇ ದಿನಕ್ಕೆ ಬಂದಿದ್ದಾರೆಂದು ರೊಚ್ಚಿಗೆದ್ದ ಕೆಲ ರೈತರು ಸಚಿವರ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಸಚಿವರು ಯಾವುದೇ ಭರವಸೆ ನೀಡದೆ ತೆರಳಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಸಚಿವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಅವರ ಕಾರಿನ ಮೇಲೆ ಚಪ್ಪಲಿ, ನೀರಿನ ಬಾಟಲ್ ಎಸೆದು ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿಂದು ಜಿಲ್ಲಾಡಳಿತದ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದ ಸಚಿವರು, ಹೋರಾಟಗಾರರು ಸಂಘರ್ಷಕ್ಕೆ ಎಡೆಮಾಡಿಕೊಡಬಾರದು. ಸಾಮರಸ್ಯದಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ. ನಾಳೆ ರಾಷ್ಟ್ರೀಯ ಹೆದ್ದಾರಿ ತಡೆಯದಂತೆ ಮನವಿ ಮಾಡಲು ಗುರ್ಲಾಪುರಕ್ಕೆ ಹೋಗುತ್ತಿದ್ದೇನೆ ಎಂದು ಹೇಳಿದರು.
ನಾಳೆ ಬೆಂಗಳೂರಿನಲ್ಲಿ ಎಲ್ಲ ಕಾರ್ಖಾನೆ ಮಾಲೀಕರ ಸಭೆಯನ್ನು ಮುಖ್ಯಮಂತ್ರಿಗಳು ಕರೆದಿದ್ದಾರೆ. ಅಲ್ಲಿನ ನಿರ್ಣಯ ನೋಡಿಕೊಂಡು ರಾಜ್ಯದ ರೈತರಿಗೆ ಸಹಾಯ ಮಾಡಲು ಪ್ರಯತ್ನಿಸುತ್ತೇವೆ ಎಂದರು.
ಇತ್ತ ಸಚಿವರ ಮನವಿ ಬೆನ್ನಲ್ಲೇ ನಾಳಿನ ರಾಷ್ಟ್ರೀಯ ಹೆದ್ದಾರಿ ಬಂದ್ ವಾಪಸ್ ಪಡೆದಿರುವ ರೈತ ಸಂಘಟನೆಗಳು ಸರ್ಕಾರಕ್ಕೆ 2 ದಿನ ಗಡುವು ಕೊಟ್ಟಿದ್ದಾರೆ. ಕಾರ್ಖಾನೆ ಮಾಲೀಕರ ಜೊತೆ ಸಿಎಂ ನಾಳೆ ಸಭೆ ನಡೆಸುವ ಹಿನ್ನೆಲೆಯಲ್ಲಿ ಸಕ್ಕರೆ ಸಚಿವರು ಎರಡು ದಿನಗಳ ಸಮಯ ಕೇಳಿದ್ದಾರೆ. ಸಚಿವರ ಮನವಿ ಹಿನ್ನೆಲೆಯಲ್ಲಿ ಹೆದ್ದಾರಿ ಬಂದ್ ವಾಪಸ್ ಪಡೆಯಲಾಗಿದೆ.
ಗುರ್ಲಾಪುರ ಕ್ರಾಸ್ ಪ್ರತಿಭಟನಾ ಸ್ಥಳಕ್ಕೆ ತೆರಳುವ ಮುನ್ನ ಖಾಸಗಿ ಹೋಟೆಲ್‌ನಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ, ಜಿಲ್ಲಾ ಪೊಲೀಸ್ ಅಧಿಕಾರಿ ಡಾ.ಭೀಮಾಶಂಕರ ಗುಳೇದ ಅವರ ಜೊತೆಗೆ ಸುಮಾರು 1 ಗಂಟೆಗೂ ಅಧಿಕ ಕಾಲ ಸಭೆ ನಡೆಸಿದರು. ಸಭೆ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದರು. ಅಲ್ಲದೇ ರೈತರನ್ನು ಭೇಟಿ ಆಗಿ ಮಾತುಕತೆ ನಡೆಸುವುದಾಗಿ ವಿವರಿಸಿದರು.
ಇದನ್ನೂ ನೋಡಿ :ಜ್ಞಾನ ಸಾಹಿತ್ಯಕ್ಕೆ ನಿರಂಜನರ ಕೊಡುಗೆ – ಎಂ.ಜಿ.ಹೆಗಡೆ Janashakthi Media
