ಮೈಸೂರು: ಮಂಡ್ಯ ಜಿಲ್ಲೆಯ ನೆಲಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣ ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ವಿಪಕ್ಷ ಬಿಜೆಪಿ-ಜೆಡಿಎಸ್ ನಾಯಕರು ಸರ್ಕಾರದ ಹಗರಣ ಮುಚ್ಚಿ ಹಾಕಲು ಕಾಂಗ್ರೆಸ್ ನಾಯಕರೇ ಮಾಡಿರುವ ಕೃತ್ಯ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ಇದು ಬಿಜೆಪಿ-ಜೆಡಿಎಸ್ ಕೃತ್ಯ ಎಂದು ಆದರೆ ಆಡಳಿತಾರೂಢ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದಾರೆ. ಈ ಮಧ್ಯೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣ ಆರ್.ಎಸ್.ಎಸ್, ಬಿಜೆಪಿ-ಜೆಡಿಎಸ್ ನವರ ಪೂರ್ವ ನಿಯೋಜಿತ ಕೃತ್ಯ ಎಂದು ಹೇಳಿದ್ದಾರೆ.
ಇದನ್ನು ಓದಿ : ಬೆಂಗಳೂರು: ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
ನಾಗಮಂಗಲದ ಪ್ರಕರಣದಲ್ಲಿ ಭಾಗಿಯಾಗಿರುವುದು ಯುವಕರು. 20 ಜನ ಹಿಂದೂಗಳು, 30 ಜನ ಮುಸ್ಲಿಂರು ಭಾಗಿಯಾಗಿದ್ದಾರೆ. ಇದು ಆರ್.ಎಸ್.ಎಸ್, ಬಿಜೆಪಿ ಹಾಗೂ ಜೆಡಿಎಸ್ ಪೂರ್ವ ನಿಯೋಜಿತ ಕೃತ್ಯ. ಈ ಬಗ್ಗೆ ಗೃಹ ಸಚಿವರು ದಾಖಲೆ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ನಾಯಕರು ನೆಲಮಂಗಲಕ್ಕೆ ಹೋಗಿ ಪ್ರಚೋದನಕಾರಿ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಮೊದಲಾದವರು ಒಂದು ಸಮುದಾಯದವರನ್ನು ಬೈದಿದ್ದಾರೆ. ಇವರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಇದನ್ನು ನೋಡಿ : ‘ಕೇಂದ್ರ ಮತ್ತು ರಾಜ್ಯಗಳ ಸಂಬಂಧ’ ಹೇಗಿರಬೇಕು? ಸಂವಿಧಾನ ಸಭೆಯಲ್ಲಿ ಏನೆಲ್ಲಾ ಚರ್ಚೆಯಾಗಿತ್ತು ಜಸ್ಟೀಸ್ .ನಾಗಮೋಹನ್