ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಬೆಳಗಾವಿಯ ಕುವೆಂಪು ನಗರದ ತಮ್ಮ ಗೃಹಕಚೇರಿಯಲ್ಲಿ ಮಾರ್ಚ್ 20 ರಂದು ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿದ್ದರು. ಈ ವೇಳೆ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿ ದೂರು ದಾಖಲಿಸಿಕೊಂಡಿತ್ತು. ಫ್ಲೈಯಿಂಗ್ ಸ್ಕ್ವಾಡ್ ತಂಡದ ಮುಖ್ಯಸ್ಥ ಮಹಾಂತೇಶ ಅವರು ಪ್ರಕರಣ ದಾಖಲಿಸುವ ಸಲುವಾಗಿ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ದೂರನ್ನು ನ್ಯಾಯಾಲಯ ಪುರಸ್ಕರಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಅವರ ಗೃಹ ಕಚೇರಿ ಇರುವ ನಿವೇಶನದ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ : ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಯ ಬಂಧನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಬುಧವಾರ ಬೆಳಗಾವಿಯಲ್ಲಿಆಟೋ ರ್ಯಾಲಿ ನಡೆಸಿ, ಕಾಂಗ್ರೆಸ್‌ ಅಭ್ಯರ್ಥಿ, ಪುತ್ರ ಮೃಣಾಲ್‌ ಹೆಬ್ಬಾಳಕರ್‌ ಪರ ಆಟೋ ಚಾಲಕರ ಮತ ಯಾಚಿಸಿದರು. ಟಿಳಕ ಚೌಕ್‌, ರಾಮದೇವ್‌ ಹೋಟೆಲ್‌, ಚನ್ನಮ್ಮ ಸರ್ಕಲ್‌, ಬೋಗಾರ್‌ ವೇಸ್‌, ಚಿತ್ರಾ ಟಾಕೀಸ್‌, ಗಣೇಶಪುರ ಸೇರಿದಂತೆ ಹಲವು ಪ್ರದೇಶದ ಆಟೋ ನಿಲ್ದಾಣಗಳಿಗೆ ಆಟೋದಲ್ಲೇ ತೆರಳಿ ಪ್ರಚಾರ ನಡೆಸಿದರು.

‘‘ಮೃಣಾಲ್‌ ಕೆಲಸ ಮಾಡುವ ಉತ್ಸಾಹ ಹೊಂದಿದ್ದಾನೆ. ಬೆಳಗಾವಿಯಲ್ಲೇ ಇದ್ದು ಕೆಲಸ ಮಾಡಲಿದ್ದಾನೆ. ಆಯ್ಕೆಯಾದ ನಂತರವೂ ನಿಮ್ಮ ಕೈಗೆ ಸಿಗಲಿದ್ದಾನೆ. ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡುವ ಮೂಲಕ ಬೆಳಗಾವಿಯ ಸ್ವಾಭಿಮಾನ ಎತ್ತಿ ಹಿಡಿಯೋಣ’’, ಎಂದು ಮನವಿ ಮಾಡಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಆಟೋ ಚಾಲಕರ ಸಂಘದ ಪದಾಧಿಕಾರಿಗಳು ಇದ್ದರು.

ಇದನ್ನು ನೋಡಿ : ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಎಷ್ಟು ಮತ ಪಡೆಯಬಹುದು?

Donate Janashakthi Media

Leave a Reply

Your email address will not be published. Required fields are marked *