ಲೈಂಗಿಕ ದೌರ್ಜನ್ಯ ಪ್ರಕರಣ : ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಹಿರಂಗ ಬಳಿಕ ವಿದೇಶಕ್ಕೆ ಪಲಾಯನ ಮಾಡಿದ್ದವರು ಇತ್ತೀಚೆಗಷ್ಟೇ ವಿಡಿಯೋ ಬಿಡುಗಡೆ ಮಾಡಿ ಮೇ 31ರಂದು ಭಾರತಕ್ಕೆ ವಾಪಸ್ಸಾಗುವುದಾಗಿ ಹೇಳಿದ್ದರು. ಇದೀಗ ರೇವಣ್ಣ ಜರ್ಮಿನಿಯಿಂದ ಬೆಂಗಳೂರಿಗೆ ಬರಲು ಲುಫ್ತಾನ್ಸಾ ಏರ್​ಲೈನ್ಸ್​ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್​ ಬುಕ್ ಮಾಡಿದ್ದಾರೆ.

ಮೇ 31ರಂದು ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲದೆ ಮೇ 31ರ ಬೆಳಗ್ಗೆ 10:30ಕ್ಕೆ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು.

ಆದರೆ ಪ್ರಜ್ವಲ್​ ರೇವಣ್ಣ ಟಿಕೆಟ್ ಬುಕ್ ಮಾಡಿರುವ ವಿಮಾನ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಮೇ 31ರ ಮಧ್ಯರಾತ್ರಿ 12:30ಕ್ಕೆ ಆಗಮಿಸಲಿರುವುದರಿಂದ ಜೂನ್ 1ಕ್ಕೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಇದನ್ನು ಓದಿ : ಯುಎಸ್ ನಲ್ಲಿ ಇಸ್ರೇಲಿ ನರಮೇಧದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ: ಕುತರ್ಕ ಮತ್ತು ಮಾನವೀಯತೆಯ ನಡುವಿನ ಹೋರಾಟ

ಪ್ರಜ್ವಲ್​ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ವಿಚಾರಣೆ ನಡೆಸುತ್ತಿರುವ ಎನ್ಐಟಿ ತಂಡ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಎಸ್​ಐಟಿ ಅಧಿಕಾರಿಗಳು ಬಂಧಿಸುವ ಎಲ್ಲಾ ಸಾಧ್ಯತೆಗಳಿವೆ. ಸದ್ಯ ಪ್ರಜ್ವಲ್ ರೇವಣ್ಣ ಯಾವ ವಿಮಾನದಲ್ಲಿ ಎಷ್ಟು ಗಂಟೆ ಬೆಂಗಳೂರಿಗೆ ಬರಲಿದೆ ಎಂಬ ಮಾಹಿತಿಯನ್ನು ಕಲೆಹಾಕುತ್ತಿದೆ.

ಈ ಮಧ್ಯೆ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ವಿಡಿಯೋ ಹಂಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನು ನೋಡಿ : ರಾಜಸ್ಥಾನ : ಬಿಜೆಪಿ ಪ್ರಾಬಲ್ಯ ಕಳೆದುಕೊಳ್ಳಲಿದೆಯೆ? ಲೆಕ್ಕಾಚಾರಗಳು ಏನು ಹೇಳುತ್ತಿವೆ! Janashakthi Media

Donate Janashakthi Media

Leave a Reply

Your email address will not be published. Required fields are marked *