ಬಾಲ್ಯ ವಿವಾಹ: 6 ಜನರ ವಿರುದ್ಧ ಪ್ರಕರಣ ದಾಖಲು

ಬೀದರ್: 17 ವರ್ಷದ ಅಪ್ರಾಪ್ತ ಬಾಲಕಿಗೆ ವಿವಾಹ ಮಾಡಿರುವ ಪ್ರಕರಣ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದ್ದು, ವರ ಹಾಗೂ ಪೋಷಕರು ಸೇರಿ ಮದುವೆಗೆ ಸಹಕರಿಸಿದ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಗ್ರಾಮದ ಚರ್ಚ್‌ನಲ್ಲಿ ಫೆ. 2ರಂದು ಅಪ್ರಾಪ್ತ ಬಾಲಕಿಗೆ ಮದುವೆ ನಡೆದಿದೆ ಎಂಬ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆಯಲ್ಲಿ ಬಾಲಕಿ ಅಪ್ರಾಪ್ತೆಯಾಗಿದ್ದು, ಮದುವೆ ನಡೆದಿರುವುದು ದೃಢಪಟ್ಟಿದೆ.

ಇದನ್ನೂ ಓದಿ: ಮಂಗಳೂರು | ಟೋಲ್ ಪ್ಲಾಜಾ ನಿರ್ಮಾಣ ನಿಯಮ ಬಾಹಿರ: ಆರೋಪ

ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರೇ ಜನವಾಡ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ನೋಡಿ: ಬೀದಿ ನಾಟಕ | ಒಂದನ್ನಾದರೂ ಒತ್ತಿ ಎರಡನ್ನಾದರೂ ಒತ್ತಿ’ Janashakthi Media

Donate Janashakthi Media

Leave a Reply

Your email address will not be published. Required fields are marked *