ಪ್ರಚೋದನಕಾರಿ ಭಾಷಣ: ಅನಂತಕುಮಾರ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

ಉತ್ತರ ಕನ್ನಡ: ದ್ವೇಷ ಭಾಷಣದ ಮೂಲಕ ಕೋಮು ಸೌಹಾರ್ಧತೆಗೆ ಧಕ್ಕೆ ತಂದು ಅಶಾಂತಿ ಮೂಡಿಸಲು ಯತ್ನಿಸಿದ ಆರೋಪದ ಮೇಲೆ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಭಾನುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  ಪ್ರಚೋದನಕಾರಿ

ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುವ ಹೇಳಿಕೆ ನೀಡಿರುವುದರ ಜತೆಗೆ ಸಾಮಾಜಿಕ ಅಶಾಂತಿಗೆ ಕಾರಣವಾಗುವ ಮಾತುಗಳನ್ನಾಡಿರುವ ಹಿನ್ನೆಲೆಯಲ್ಲಿ ಅನಂತಕುಮಾರ ಹೆಗಡೆ ವಿರುದ್ಧಐಪಿಸಿ ಸೆಕ್ಷನ್ 153, 153 (ಎ) ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ : ಚುನಾವಣಾ ರಾಮ    ಪ್ರಚೋದನಕಾರಿ

ಕುಮಟಾದಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದ ಅನಂತಕುಮಾರ ಹೆಗಡೆ ಅವರು, ರಾಮ ಮಂದಿರ ವಿಚಾರ ಪ್ರಸ್ತಾಪಿಸುತ್ತಾ, ಬಾಬರಿ ಮಸೀದಿಯಂತೆ ದೇವಸ್ಥಾನಗಳ ಕುರುಹು ಇರುವ ಭಟ್ಕಳ, ಶಿರಸಿ ಹಾಗೂ ಇತರ ಮಸೀದಿಗಳನ್ನು ಒಡೆಯುವುದಾಗಿ ಹೆಗಡೆ ಹೇಳಿಕೆ ನೀಡಿದ್ದರು. ಸೇಡು ತೀರಿಸಿಕೊಳ್ಳುವ ವರೆಗೆ ಸುಮ್ಮನಿರುವುದಿಲ್ಲ. ರಣಭೈರವ ಎದ್ದಾಗಿದೆ ಎಂದು ತೀರಾ ಪ್ರಚೋದನಕಾರಿ ಮಾತು ಆಡಿದ್ದರು. ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ, ರಾಜೀವಗಾಂಧಿ ವಿರುದ್ಧವೂ ಆಕ್ಷೇಪಾರ್ಹ ಪದ ಬಳಸಿ ಮಾತನಾಡಿದ್ದರು.

ಅನಂತ್ ಹೆಗಡೆ ಇಷ್ಟು ದಿನ ವಿಶ್ರಾಂತಿಯಲ್ಲಿದ್ದರು. ಈಗ ಬಂದು ಏನೇನೋ ಮಾತಾಡುತ್ತಿದ್ದಾರೆ. ಜನರೇ ಅವರಿಗೆ ಉತ್ತರ ಕೊಡುತ್ತಾರೆ ಎಂದು ಕಾಂಗ್ರೆಸ್‌ ನಾಯಕರು ಪ್ರತಿಕ್ರಿಯಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಬೆಂಗಳೂರಿನ ರೇಸ್‌ ಕೋರ್ಸ್‌ ರಸ್ತೆಯ ಕಾಂಗ್ರೆಸ್ ಪಕ್ಷದ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಅನಂತ್ ಕುಮಾರ್‌ ಅವರ ಪ್ರತಿಕೃತಿ ದಹಿಸಿ ಅಕ್ರೋಶ ವ್ಯಕ್ತಪಡಿಸಿದರು.  ಪ್ರಚೋದನಕಾರಿ

ಈ ವಿಡಿಯೋ ನೋಡಿಸುಗ್ಗಿ ಹಬ್ಬ. ಸಂಕ್ರಾಂತಿಯ ಸೊಬಗು..ಜನಪದ ಹಾಡು… Janashakthi Media

 

Donate Janashakthi Media

Leave a Reply

Your email address will not be published. Required fields are marked *