ಪ್ರಚೋದನಾತ್ಮಕ ಭಾಷಣ ಮಾಡಿದರೆ ಪ್ರಕರಣ ದಾಖಲಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಮಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಅಕ್ಟೋಬರ್‌ 27ರಂದು ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್‌ಐಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.

ಇದನ್ನೂ ಓದಿ: ಹುಬ್ಬಳ್ಳಿ | ಗುಲಗಂಜಿ ಗಿಡದ ಎಲೆ ತಿಂದು ಮಗು ಅಸ್ವಸ್ಥ : ಔಷಧಿಗಾಗಿ ರಾತ್ರಿ ಪರದಾಟ

ಇನ್ನು ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್‌ಐಟಿ ವರದಿ ಸಲ್ಲಿಕೆ ಬಗ್ಗೆ, ಎಸ್‌ಐಟಿಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್‌ಐಟಿ ವರದಿ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹಸಚಿವರು ಹೇಳಿದ್ದಾರೆ ಎಂದರು.

ಇದನ್ನೂ ನೋಡಿ: ದ್ವೇಷ ಭಾಷಣ| ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲು Janashakthi Media

Donate Janashakthi Media

Leave a Reply

Your email address will not be published. Required fields are marked *