ಬೆಂಗಳೂರು: “ಹಿಂದಿನ ಬಿಜೆಪಿ ಸರಕಾರ ಕೋಮು ಘಟನೆಗೆ ಸಂಬಧಪಟ್ಟ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಜತೆಗೆ ಸಾವಿರಾರು ರೌಡಿ ಶೀಟರ್‌ಗಳನ್ನು ಬೀದಿಗೆ ಬಿಟ್ಟಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ತಮ್ಮ ಸರ್ಕಾರ ತೆಗೆದವರನ್ನೇ ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಇಳಿದಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳು, ಗಲಭೆ ಪ್ರಕರಣ ಹಿಂಪಡೆಯುವಂತೆ ನೀವು ಪತ್ರ ಬರೆದಿದ್ದೀರಾ ಎನ್ನುವುದನ್ನು ಬಿಜೆಪಿ ಅಸ್ತ್ರವಾಗಿಸಿಕೊಂಡಿದೆ ಎಂದು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂಪಡೆಯಲಾದ ಕೋಮು ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು.