ಜಾತಿ ನಿಂದನೆ ಹಾಗೂ ಮಾನಸಿಕ ಕಿರುಕುಳ | ದ್ವಿತೀಯ ದರ್ಜೆ ಸಹಾಯಕ ಹೃದಯಾಘಾತದಿಂದ ಮೃತ

ಹಾಸನ: ಜಿಲ್ಲೆಯ ಹೊಳೆನರಸೀಪುರದ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಾರ್ಯಾಲಯ(ಬಿಇಒ)ದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕಿರಣ್ (31) ಸೆಪ್ಟೆಂಬರ್ 3ರ ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದು, ಇವರ ಸಾವಿಗೆ ಜಾತಿ ನಿಂದನೆ, ಮಾನಸಿಕ‌ ಕಿರುಕುಳ ನೀಡಿದ್ದೆ ಕಾರಣ ಎಂದು ಆರೋಪಿಸಲಾಗಿದೆ.

ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ ಅವರನ್ನು ಸೆಪ್ಟೆಂಬರ್‌ 31ರಂದು ಹೊಳೆನರಸೀಪುರ ಬಿಇಒ ಕಚೇರಿಯಿಂದ ಯಳ್ಳೇಶಪುರಕ್ಕೆ ವರ್ಗಾವಣೆ ಮಾಡಲಾಗಿತ್ತು. ಸಿಡಿಪಿಓ ಭಾಗ್ಯಮ್ಮ, ಕೇಸ್ ವರ್ಕರ್ ಸುನೀಲ್ ಅವರು ಕಿರಣ್ ಅವರಿಗೆ ಜಾತಿ ನಿಂದನೆ ಮಾಡಿದ್ದು, ಮಾನಸಿಕ‌ ಕಿರುಕುಳ ನೀಡಿ ವರ್ಗಾವಣೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಲಾಡ್ಲಾಪುರ ಹೈಸ್ಕೂಲ್ ಮುಖ್ಯ ಶಿಕ್ಷಕ ಬಂಧನ

ನಿರಂತರ ಕಿರುಕುಳದ ಒತ್ತಡದಿಂದ ಅವರು ಹೃದಯಾಘಾತಕ್ಕೊಳಗಾಗಿದ್ದಾರೆ ಎಂದು ಆರೋಪಿಸಲಾಗಿದೆ. ಕಿರಣ್ ಪೋಷಕರು ಹಾಗೂ ದಲಿತ ಸಂಘಟನೆಗಳಿಂದ ಹೊಳೆನರಸೀಪುರದ ಬಿಇಓ‌ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಅಧಿಕಾರಿಗಳ ಒತ್ತಡವೇ ಹೃದಯಾಘಾತಕ್ಕೆ ಕಾರಣ ಎಂದು ಆಕ್ರೋಶ ಪ್ರತಿಭಟನಾಕಾರರು ಆರೋಪಿಸಿದ್ದು, ಕಿರಣ್ ಸಾವಿಗೆ ಕಾರಣರಾದವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಹೊಳೆನರಸೀಪುರ ತಾಲ್ಲೂಕಿನ, ಲಕ್ಷ್ಮೀಪುರ ಗ್ರಾಮದವರಾದ ಕಿರಣ್‌ ಭಾನುವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬಿಇಓ ಕಚೇರಿ ಎದುರು ಬಿಗುವಿನ ವಾತಾವರಣವಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ವರದಿಯಾಗಿದೆ.

ಘಟನೆ ಬಗ್ಗೆ ಜನಶಕ್ತಿ ಮೀಡಿಯಾ ಜೊತೆಗೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇ ಗೌಡ,”ಅವರ ವಿರುದ್ಧ ಜಾತಿ ನಿಂದನೆ ಮಾಡಿರುವ ಬಗ್ಗೆ ನನಗೇನೂ ಮಾಹಿತಿ ಇಲ್ಲ. ಜಾತಿ ನಿಂದನೆ ಮಾಡಿರುವ ಬಗ್ಗೆ ನನ್ನ ಜೊತೆಗೆ ಯಾವುದೆ ವಿಚಾರವನ್ನು ಹೇಳಿಲ್ಲ. ಅವರ ಕುಟುಂಬ ಆರೋಪ ಮಾಡುತ್ತಿರುವವರ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಅವರೀಗ ಕಚೇರಿಗೆ ಬಂದಿದ್ದೇನೆ, ಈ ಬಗ್ಗೆ ವರದಿ ಮಾಡುತ್ತೇನೆ” ಎಂದು ಹೇಳಿದರು.

ವಿಡಿಯೊ ನೋಡಿ: ಮುಂದಿನ ಕೆಲವು ವರ್ಷಗಳಲ್ಲಿ ಭಾರತ 3ನೇ ಆರ್ಥಿಕ ದೇಶವಾಗುತ್ತದೆಯೇ? Janashakthi Media

Donate Janashakthi Media

Leave a Reply

Your email address will not be published. Required fields are marked *