ಮಂಗಳೂರು: ಶಿಕ್ಷಣದ ಖಾಸಗೀಕರಣವು ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿದೆ. ಈ ಸಮಾಜದಲ್ಲಿ ಬಡವರ ಮಕ್ಕಳೂ ಶಿಕ್ಷಣ ಪಡೆಯುತ್ತಿದ್ದಾರೆ. ಅವರ ಜೀವನ…
ಜನದನಿ
ನೋಟು ರದ್ಧತಿ ಕ್ರಮ ವಿನಾಶಕಾರಿ ಎಂದು ಸಾಬೀತು ಮಾಡಿದೆ 2000 ರೂ. ನೋಟು ಹಿಂಪಡಿಕೆ-ಯೆಚುರಿ
ನವದೆಹಲಿ : ರಿಝರ್ವ್ ಬ್ಯಾಂಕ್ ರೂ.2000 ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಮೂಲಕ 2016ರಲ್ಲಿ ಮೋದಿಯವರು ಅದ್ದೂರಿಯಾಗಿ ಪ್ರಕಟಿಸಿದ 2016 ರ ನೋಟು…
ನೀರಿನ ಅಭಾವ : ಶಾಶ್ವತ ಪರಿಹಾರಕ್ಕೆ ಡಿವೈಎಫ್‌ಐ ಆಗ್ರಹ
ಮಂಗಳೂರು : ನಗರದಲ್ಲಿ ಕುಡಿಯುವ ನೀರಿನ ಕೊರತೆ ದಿನೇ ದಿನೇ ಹೆಚ್ಚಾಗುತ್ತಿದೆ ಮಂಗಳೂರು ನಗರಪಾಲಿಕೆ ಪ್ರತಿವರ್ಷ ನೀರಿನ ಅಭಾವ ಎದುರಿಸಲು ಅನೇಕ…
ರೈತರ ಹಕ್ಕುಗಳನ್ನು ಬೆಂಬಲಿಸಿದ ಸಂಶೋಧಕಿಯನ್ನು ತನಿಖೆಗೆ ಗುರಿಪಡಿಸಿದ ಇ.ಡಿ.: ವಿಶ್ವಾದ್ಯಂತ ತೀವ್ರ ಖಂಡನೆ-ಪ್ರತಿಭಟನೆ
ಸಂಶೋಧಕಿ, ಲೇಖಕಿ ಮತ್ತು ಸಕ್ರಿಯ ಕಾರ್ಯಕರ್ತೆ ಮತ್ತು ಪ್ರಧಾನ ಮಂತ್ರಿಗಳನ್ನು ಮಣಿಸಿದ ರೈತರ ಐತಿಹಾಸಿಕ ಹೋರಾಟವನ್ನು ಸಕ್ರಿಯವಾಗಿ ಬೆಂಬಲಿಸಿದ ಡಾ. ನವಶರಣ್ ಸಿಂಗ್ ಅವರನ್ನು ಮೇ 10ರಂದು ಏಳು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ (ಇ.ಡಿ.) ಪಿಎಂಎಲ್‌ಎ(ಕಪ್ಪು ಹಣವನ್ನು ಬಿಳುಪು ಮಾಡುವುದನ್ನು ತಡೆಯುವ) ಕಾಯ್ದೆಯ ಅಡಿಯಲ್ಲಿ ವಿಚಾರಣೆಗೆ ಗುರಿಪಡಿಸಿರುವುದಕ್ಕೆ ದೇಶ-ವಿದೇಶಗಳಲ್ಲಿ ವ್ಯಾಪಕ ಖಂಡನೆ ಮತ್ತು ಪ್ರತಿಭಟನೆಗಳು ವ್ಯಕ್ತವಾಗಿವೆ. ರೈತ ಹೋರಾಟಕ್ಕೆ ನೇತೃತ್ವ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಒಂದು ಹೇಳಿಕೆಯನ್ನು ನೀಡಿ, ಡಾ. ನವಶರಣ ಅವರು ದಿಲ್ಲಿ ಗಡಿಗಳಲ್ಲಿ ಐತಿಹಾಸಿಕ ರೈತ ಚಳವಳಿಯ ಪ್ರಮುಖ ಬೆಂಬಲಿಗರಲ್ಲಿ ಒಬ್ಬರು, ರೈತರ ಹೋರಾಟದ ಸಂದೇಶವನ್ನು ಅಂತಾರಾಷ್ಟ್ರೀಯ ವೇಧಿಕೆಗಳಿಗೆ ಕೊಂಡೊಯ್ದರು. ಇದಕ್ಕಾಗಿಯೇ ಮೋದಿ ಸರ್ಕಾರ ಆಕೆಯ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ ಎಂಬುದರಲ್ಲಿ ಸಂದೇಹವಿಲ್ಲ ಎನ್ನುತ್ತ ,ನ್ಯಾಯಕ್ಕಾಗಿ ಆಕೆಯ ಅನ್ವೇಷಣೆಯಲ್ಲಿ ಎಸ್‌ಕೆಎಂ ಅವರಿಗೆ ಎಲ್ಲಾ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದೆ. ಇದು ಡಾ.ನವಶರಣ್ ಸಿಂಗ್ ಅವರಿಗೆ ಕಿರುಕುಳ ನೀಡುವ ಮತ್ತು ಬೆದರಿಸುವ ಬಿಜೆಪಿ ಸರ್ಕಾರದ ದುಷ್ಟ ಪ್ರಯತ್ನ ಎಂದು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ತೀವ್ರವಾಗಿ ಖಂಡಿಸಿದೆ. ಪಿಎಂಎಲ್‌ಎ ಅಡಿಯಲ್ಲಿ ಅವರನ್ನು ಪ್ರಶ್ನಿಸುವ ಜಾರಿ ನಿರ್ದೇಶನಾಲದ ಕ್ರಮ ಭಿನ್ನಾಭಿಪ್ರಾಯದ ದನಿಗಳನ್ನು ಅಡಗಿಸುವ ಇನ್ನೊಂದು ಪ್ರಯತ್ನವಾಗಿದೆ. ಪ್ರಜಾಸತ್ತಾತ್ಮಕ ಹಕ್ಕುಗಳ ಪ್ರತಿಪಾದಕರಾಗಿ, ಸಾರ್ವಜನಿಕ ಚಿಂತಕರಾಗಿ ಮಹತ್ವದ ಪಾತ್ರ ವಹಿಸುತ್ತಿರುವ ಅವರು ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ರೈತ-ವಿರೋಧಿ ಮತ್ತು ಜನವಿರೋಧಿ ನೀತಿಗಳಿಗೆ ತಮ್ಮ ವಿರೋಧವನ್ನು ನಿರಂತರವಾಗಿ ವ್ಯಕ್ತಪಡಿಸುತ್ತ ಬಂದಿರುವವರು. ಖ್ಯಾತ ನಾಟಕಕಾರ ದಿವಂಗತ ಗುರುಶರಣ್ ಸಿಂಗ್ ಅವರ ಪುತ್ರಿಯಾಗಿರುವ ಅವರು ರೈತ ಚಳವಳಿಗಳ ಕಟ್ಟಾ ಬೆಂಬಲಿಗರಾಗಿ ಬಿಜೆಪಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದರು ಎಂದು ಎಐಕೆಎಸ್ ಕೂಡ ನೆನಪಿಸಿದೆ. ಖ್ಯಾತ ಹಕ್ಕು ಕಾರ್ಯಕರ್ತ ಹರ್ಷ್ ಮಂದರ್ ನೇತೃತ್ವದ ಟ್ರಸ್ಟ್ ‘ಅಮನ್ ಬಿರಾದಾರಿ’ ಮಂಡಳಿಯ ಸದಸ್ಯರಾಗಿರುವ ಅವರನ್ನು ಈ ಟ್ರಸ್ಟ್£ ಕೆಲವು ಹಣಕಾಸಿನ ವಹಿವಾಟುಗಳು ಮತ್ತು ಹರ್ಷಮಂದರ್ ಅವರೊಂದಿಗಿನ ಸಂಬAಧದ ಬಗ್ಗೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ. ಜನರ ಹಕ್ಕುಗಳನ್ನು ಮತ್ತು ಕೋಮು ಸೌಹಾರ್ದವನ್ನು ಪ್ರತಿಪಾದಿಸುತ್ತ, ಈ ಹಕ್ಕುಗಳ ಮತ್ತು ಸೌಹಾರ್ದದ ಉಲ್ಲಂಘನೆಯ ವಿರುದ್ಧ ದೇಶವಿಡೀ ಸಂಚರಿಸುತ್ತಿರುವ ಮಾಜಿ ಉನ್ನತ ಸರಕಾರೀ ಅಧಿಕಾರಿ ಹರ್ಷ ಮಂದರ್ ಅವರ ದನಿಯನ್ನು ಅಡಗಿಸಲು ಆರಂಭಿಸಿರುವ ಈ ತನಿಖೆಯಲ್ಲಿ ಈಗ ನವಶರಣ್ ಸಿಂಗ್‌ರವರನ್ನು ಕೂಡ ಸೇರಿಸಿರುವುದು ದೇಶದಾದ್ಯಂತ ಬುದ್ಧಿಜೀವಿಗಳು ಮತ್ತು ಪ್ರಜಾಪ್ರಭುತ್ವ ಹಕ್ಕುಗಳ ಕಾರ್ಯಕರ್ತರನ್ನು ಗುರಿಯಾಗಿಸುವ ಮೋದಿ ಸರ್ಕಾರದ ವಿಶಾಲ ಮಾದರಿಯ ಭಾಗವಾಗಿದೆ ಎಂದಿರುವ ಎಐಕೆಎಸ್ ಪ್ರಗತಿಪರ ಮತ್ತು ಪ್ರಜಾಪ್ರಭುತ್ವವಾದಿ ದನಿಗಳ ಮೇಲೆ ಬಿಜೆಪಿ ಸರ್ಕಾರದ ಫ್ಯಾಸಿಸ್ಟ್ ದಾಳಿಗಳ ವಿರುದ್ಧ ದನಿ ಎತ್ತುವಂತೆ ಜನಾಂದೋಲನದ ಎಲ್ಲಾ ವಿಭಾಗಗಳಿಗೆ ಮನವಿ ಮಾಡಿದೆ. ಅಖಿಲ ಭಾರತ ಅರಣ್ಯ ದುಡಿಯುವ ಜನರ ಸಂಘ ಮತ್ತು ಇಂಡಿಯನ್ ಪೀಪಲ್ಸ್ ಥಿಯೇಟರ್ ಅಸೋಸಿಯೇಷನ್ ಕೂಡ ಇದು ಭಿನ್ನಾಭಿಪ್ರಾಯದ ದನಿಗಳನ್ನು ತೊಡೆದುಹಾಕಲು ಬುದ್ಧಿಜೀವಿಗಳು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸುವ ನಿಂದನೀಯ ಕೃತ್ಯ ಎಂದು ಖಂಡಿಸಿವೆ. ಡಾ.ನವಶರಣ್ ಸಿಂಗ್ ಕೆನಡಾದ ಕಾರ್ಲೆಟನ್ ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಅಲ್ಲಿಯೂ ಬೌದ್ಧಿಕ ವಲಯದಲ್ಲಿ ಖ್ಯಾತರಾಗಿರುವ ಅವರನ್ನು ಬೆಂಬಲಿಸಿ ಕೆನಡಾದ 20 ಕ್ಕೂ ಹೆಚ್ಚು ಸಂಸ್ಥೆಗಳು ಜಂಟಿ ಹೇಳಿಕೆಯನ್ನು ನೀಡಿದ್ದು, ಇ.ಡಿ. ಯ ಈ ಕ್ರಮವನ್ನು ಪ್ರಗತಿಪರ ಧ್ವನಿಗಳನ್ನು ಗುರಿಯಾಗಿಸಿಕೊಂಡಿರುವ ಮೋದಿ ಸರ್ಕಾರದ ಬಂಧನಗಳೋAದಿಗೆ ತಳುಕು ಹಾಕುತ್ತ “ದಕ್ಷಿಣ ಏಷ್ಯಾದ ಒಬ್ಬ ಸಾಧಕಿ, ವಿದ್ವಾಂಸೆ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತೆ, ಡಾ. ಸಿಂಗ್ ಅವರು ತಳಮಟ್ಟದ ಕೆಲಸದ ಸುದೀರ್ಘ ಇತಿಹಾಸವನ್ನು ಹೊಂದಿದ್ದಾರೆ ಮತ್ತು ಅವರ ದಿವಂಗತ ತಂದೆಯಿAದ ಪಡೆದ ಪರಂಪರೆಯನ್ನು ಮುಂದಕ್ಕೊಯ್ಯುತ್ತಿದ್ದಾರೆ ಗ್ರಾಮೀಣ ಪಂಜಾಬ್ ಮತ್ತು ಇತರೆಡೆಗಳಲ್ಲಿ ಬಡವರು ಮತ್ತು ವಂಚಿತರನ್ನು ತಲುಪುವ ಮೂಲಕ, ಅವರ ಬೆಂಬಲ ಮತ್ತು ವಕಾಲತ್ತು ಅವರಿಗೆ ಜನಸಾಮಾನ್ಯರ ಪ್ರೀತಿ ಮತ್ತು ಗೌರವವನ್ನು ಗಳಿಸಿ ಕೊಟ್ಟಿದೆ. ಇದು ಅವರು ಮೋದಿಯ ಕಠೋರ ಕಾನೂನುಗಳ ವಿರುದ್ಧ ಭಾರತೀಯ ರೈತರ ಹೋರಾಟವನ್ನು ಧೈರ್ಯದಿಂದ ಬೆಂಬಲಿಸಿದಾಗ ಸ್ಪಷ್ಟವಾಗಿದೆ. …ಡಾ. ನವಶರಣ್ ಸಿಂಗ್ ಮತ್ತು ಅವರ ತಳಮಟ್ಟದ ಮತ್ತು ಶೈಕ್ಷಣಿಕ ಕೆಲಸಗಳ ಬಗ್ಗೆ ತಿಳಿದಿರುವ ಅಥವಾ ಪರಿಚಿತರಾಗಿರುವ ನಮಗೆ, ಆಡಳಿತದ ತನಿಖಾ ಸಂಸ್ಥೆಗಳಿAದ ಆಕೆಯ ಕಿರುಕುಳವು ಆಕ್ರೋಶ ಉಂಟು ಮಾಡಿದೆ, ಇದನ್ನು ಒಪ್ಪಲು ಸಾಧ್ಯವಿಲ್ಲ , ಅದನ್ನು ದೃಢವಾಗಿ ವಿರೋಧಿಸಬೇಕು” ಎಂದಿವೆ.
ವಿದ್ಯುತ್ ಮೀಟರೀಕರಣದ ಸುತ್ತೋಲೆ ವಿರೋಧಿಸಲು ಪ್ರಾಂತ ರೈತ ಸಂಘ ಕರೆ
ಬೆಂಗಳೂರು : ಹತ್ತು ಹೆಚ್ ಪಿ ಗಿಂತ ಕಡಿಮೆ ಇರುವ ಎಲ್ಲಾ ಕೃಷಿ ಪಂಪಸೆಟ್ ಗಳಿಗೆ, ಮೀಟರ್ ಅಳವಡಿಸಿ, ಅದರ ಆರ್…
ವಿದ್ಯಾರ್ಥಿ ವಿರೋಧಿ, ಸಂವಿಧಾನ ವಿರೋಧಿ ಬಿಜೆಪಿ ಪಕ್ಷವನ್ನು ಸೋಲಿಸಲು – ಎಸ್ಎಫ್ಐ ಕರೆ
ಬೆಂಗಳೂರು : ಕರ್ನಾಟಕ ವಿಧಾನಸಭೆ 2023 ಮೇ 10 ರಂದು ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಕರ್ನಾಟಕ ಜನತೆಯ ನೆಮ್ಮದಿ ಭವಿಷ್ಯ…
ಬಾಗೇಪಲ್ಲಿ : ಸಿಪಿಐಎಂ ಅಭ್ಯರ್ಥಿ ಡಾ.ಎ ಅನಿಲ್ ಕುಮಾರ್ ಚುನಾಯಿಸಲು ಕೆ.ಪಿಆರ್‌ಎಸ್ ಮನವಿ
ಬೆಂಗಳೂರು : ಮೇ 10 ,2023 ರಂದು ನಡೆಯುತ್ತಿರುವ ವಿಧಾನ ಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ಮತ ಕ್ಷೇತ್ರದಿಂದ ಸಿಪಿಐಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ…
ಜನ ವಿರೋಧಿ ಬಿಜೆಪಿಯನ್ನು ಸೋಲಿಸಿ ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಸಿಪಿಎಂ ಕರೆ
ಹಾಸನ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೋಮುವಾದಿ, ಭ್ರಷ್ಟಾಚಾರಿ, ಲೈಂಗಿಕ ಹಗರಣಗಳಿಂದ ರಾಜ್ಯಕ್ಕೆ ಕಂಟಕಪ್ರಾಯವಾಗಿರುವ ಬಿಜೆಪಿಯನ್ನು ಸೋಲಿಸಿ ಜಾತ್ಯತೀತ…
ಲೈಂಗಿಕ ದೌರ್ಜನ್ಯದ ವಿರುದ್ಧ ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೆ ಬೆಂಬಲಿಸಿ ನ್ಯಾಯಕ್ಕಾಗಿ ಪ್ರತಿಭಟನೆ
ಬೆಂಗಳೂರು : ಲೈಂಗಿಕ ದೌರ್ಜನ್ಯದ ವಿರುದ್ಧ ಹೋರಾಟವನ್ನುನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳಿಗೆ ಬೆಂಬಲವಾಗಿ ಹಾಗೂ ಕಿರುಕಳಕ್ಕೆ ಕಾರಣ ಎನ್ನಲಾದ WFI ಅಧ್ಯಕ್ಷರು ಮತ್ತು…
ಪದವಿ ಪೂರ್ವ ಪೂರಕ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ
ರಾಯಚೂರು : ಜಿಲ್ಲೆಯ ಸಿರವಾರ ತಾಲ್ಲೂಕಿನಲ್ಲಿ ಸುಮಾರು 5 ಪಿಯುಸಿ ಕಾಲೆಜುಗಳಿದ್ದು ಇಲ್ಲಿ ಹಲವಾರು ವರ್ಷಗಳಿಂದ ಸಾಕಷ್ಟು ಬಡ ವಿದ್ಯಾರ್ಥಿಗಳು ವ್ಯಾಸಂಗಮಾಡಿ…
ಶ್ರಮಿಕ ವರ್ಗಕ್ಕೆ ನ್ಯಾಯ ಕೊಡಿಸಲು ಬದುಕನ್ನೇ ಮುಡುಪಾಗಿಸಿದ ಹಿರಿಯ ನ್ಯಾಯವಾದಿ ಕೆ.ಸುಬ್ಬರಾವ್ ಇನ್ನಿಲ್ಲ
ಹಿರಿಯ ನ್ಯಾಯವಾದಿ ಕೆ. ಸುಬ್ಬರಾವ್ ಅವರು ಇಂದು ಬೆಳಿಗ್ಗೆ 6.30ಕ್ಕೆ ನಿಧನರಾದರು ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರು ಕರ್ನಾಟಕ ಕಂಡ…
ಪ್ರತಿ ಟನ್ ಕಬ್ಬಿಗೆ 5 ಸಾವಿರ ರೂ. ನಿಗದಿಗೆ ಒತ್ತಾಯಿಸಿ ಎಐಕೆಎಸ್ ನೇತೃತ್ವದಲ್ಲಿ ಧರಣಿ
ನವದೆಹಲಿ : ರೈತ ಬೆಳಯುವ ಪ್ರತಿ ಟನ್ ಕಬ್ಬಿಗೆ ಎಫ್ ಆರ್ ಪಿ ಬದಲು 5 ಸಾವಿರ ರೂಪಾಯಿಗಳನ್ನು ನಿಗದಿಗಿಳಿಸುವಂತೆ ಒತ್ತಾಯಿಸಿ…
ಹತ್ಯೆಗೀಡಾದ ಗೋ ವ್ಯಾಪಾರಿ ಇದ್ರಿಶ್ ಪಾಷಾ ಕುಟುಂಬಕ್ಕೆ ಪರಿಹಾರದ ಜೊತೆಗೆ ಸರ್ಕಾರಿ ಉದ್ಯೋಗ ನೀಡುವಂತೆ ಸಿಪಿಐಎಂ ಒತ್ತಾಯ
ಮಂಡ್ಯ : ಕೆಲವು ದಿನಗಳ ಹಿಂದೆಯಷ್ಟೇ ಪುನೀತ್ ಕೆರೆಹಳ್ಳಿ ಎಂಬುವವರಿಂ ಹತ್ಯೆಗೀಡಾದ ಎನ್ನಲಾದ ಗೋ ವ್ಯಾಪಾರಿ ಇದ್ರಿಶ್ ಪಾಷಾ ಅವರು ಕುಟುಂಬಕ್ಕೆ…
ಕೈ ಸೇರದ ಹಕ್ಕುಪತ್ರ : ಗ್ರಾಮಸ್ಥರಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ
ಮಂಡ್ಯ : “ನಾವು ಕಳೆದ 60-70 ವರ್ಷಗಳಿಂದ ಇದೇ ಗ್ರಾಮದಲ್ಲಿ ವಾಸ ಮಾಡುತ್ತಿದ್ದೇವೆಯಾದರೂ ನಮಗೆ ಈವರೆಗೆ ನಿವೇಶನ ಹಕ್ಕು ಪತ್ರವನ್ನು ಒದಗಿಸಿಕೊಡುವಲ್ಲಿ…
ಲೂಟಿಕೋರ ಕಾರ್ಪೋರೇಟ್ ಪರ ನೀತಿಗಳೇ ಮುಸ್ಲಿಂ – ನಾಗರೀಕರ ಮೇಲಿನ ದಾಳಿಗಳ ಮೂಲ : ಸಿಪಿಐಎಂ ಆರೋಪ
ಬೆಂಗಳೂರು : ಕನಕಪುರ ತಾಲೂಕಿನ ಸಾತನೂರು ಬಳಿ ಗೋರಕ್ಷಕ ಮುಸುಕಿನ ಕೊಲೆಗಡುಕ ಗೂಂಡಾ ಪಡೆ ಇದ್ರಿಶ್ ಪಾಷಾ ಎಂಬ ಬಡ ಕಾರ್ಮಿಕನನ್ನು…
ರೈತರ ಮೇಲಿನ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ
ತುಮಕೂರು : ತುಮಕೂರಿನ ಗಂಗಯ್ಯನಪಾಳ್ಯದ ರೈತರ ಮೇಲೆ ಅರಣ್ಯ ಇಲಾಖೆಯವರು ನಡೆಸಿದ ದೌರ್ಜನ್ಯ ವಿರೋಧಿಸಿ ತುಮಕೂರಿನಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ…
ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ದೌರ್ಜನ್ಯ
ಮಾರ್ಚ್ 31ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಗುಬ್ಬಿ : ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಗಂಗನಪಾಳ್ಯದ ಸುತ್ತಮುತ್ತಲಿನ ಗ್ರಾಮಗಳ…
ಮೀಸಲಾತಿ ವಾಪಾಸು ಮುಸ್ಲಿಂ ಧ್ವೇಷದ ಭಾಗ : ಸಿಪಿಐಎಂ ಖಂಡನೆ
ಬೆಂಗಳೂರು : ಕರ್ನಾಟಕ ರಾಜ್ಯ ಸರಕಾರ ಹಿಂದುಳಿದ ವರ್ಗ 2 ಬಿ ಅಡಿಯಲ್ಲಿ ಶೇ 4 ರಷ್ಠು ಮೀಸಲಾತಿ ಹೊಂದಿದ್ದ ಮುಸ್ಲಿಂ…
ಇಬ್ಬರು ಮಹಿಳೆಯರ ಸಾವು; ಡಿಬಿಎಲ್ ಕಂಪನಿ ವಿರುದ್ಧ ಕ್ರಮ- ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಸಂಘಟನೆಗಳ ಮನವಿ
ಮದ್ದೂರು: ತಾಲೂಕು ಆತಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಲಂ ಶೆಟ್ಟಹಳ್ಳಿ ಗ್ರಾಮದ ಕೆರೆಯಲ್ಲಿ ದಿಲೀಪ್ ಬಿಲ್ಡರ್ಸ್ ಕಂಪನಿ(ಡಿಬಿಎಲ್)ಯೂ ಅವೈಜ್ಞಾನಿಕವಾಗಿ ಕೆರೆಯ ದಡದಲ್ಲಿ…
ಆಧಾರ್ ಪಾನ್ ಕಾರ್ಡ್ ಲಿಂಕ್ ಹೆಸರಲ್ಲಿ ಸಾಮಾನ್ಯ ಜನರ ಸುಲಿಗೆ: ಡಿವೈಎಫ್ಐ
ಬೆಂಗಳೂರು: ಪಾನ್ ಕಾರ್ಡನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲು ಸರಕಾರ ಮಾರ್ಚ್ 31 ವರೆಗೆ ರೂ. 1,000 ದಂಡವನ್ನು ಬಡಜನರಿಂದ ಲೂಟಿ…