ನವದೆಹಲಿ: ಕರ್ನಾಟಕ ಮತ್ತು ತಮಿಳು ನಾಡಿನ ಮಧ್ಯೆ ಇರುವ ಕಾವೇರಿ ವಿವಾದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಸೆಪ್ಟೆಂಬರ್-1 ರಂದು ಮುಂದೂಡಿದೆ.
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆಗೆ ಪರಿಗಣಿಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 6ರ ಬುಧವಾರಕ್ಕೆ ಮುಂದೂಡಿಕೆ ಮಾಡಿದೆ.
ಇದನ್ನೂ ಓದಿ:ಕಾವೇರಿ ನದಿ ನೀರು ಹಂಚಿಕೆ ವಿವಾದ: ಪ್ರತ್ಯೇಕ ಪೀಠ ರಚನೆಗೆ ಒಪ್ಪಿದ ಸುಪ್ರೀಂ ಕೋರ್ಟ್
ನಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಪಾಲಿಸಿದ್ದೇವೆ ಎಂದು ಕರ್ನಾಟಕ ಪರ ವಕೀಲ ಶ್ಯಾಮ್ ದಿವಾನ್ ಸುಪ್ರೀಂ ಕೋರ್ಟ್ಗೆ ತಿಳಿಸಿದರು. ಆದರೆ, 5000 ಕ್ಯೂಸೆಕ್ ನೀರು ಸಾಕಾಗುವುದಿಲ್ಲ. ಕರ್ನಾಟಕವು ಹೆಚ್ಚು ನೀರು ಹರಿಸಬೇಕು ಎಂದು ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿ ವಾದ ಮಂಡನೆ ಮಾಡಿದರು.
ಕೊನೆಯಲ್ಲಿ ಸೆಪ್ಟೆಂಬರ್ 11ರಂದು ವಿಚಾರಣೆ ನಡೆಸುಂತೆ ಕರ್ನಾಟಕದ ವಕೀಲರು ಒತ್ತಾಯಿಸಿದರು. ಆದರೆ, ಸೋಮವಾರ ವಿಚಾರಣೆ ನಡೆಸುವಂತೆ ತಮಿಳುನಾಡು ವಕೀಲರು ಆಗ್ರಹಿಸಿದರು. ಕೊನೆಯದಾಗಿ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 6ರ ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿತು.