ಚೆನ್ನೈ: ಕರ್ನಾಟಕ ಸರ್ಕಾರವು ಕಾವೇರಿ ನೀರನ್ನು ಸಮರ್ಪಕವಾಗಿ ಬಿಡುವಂತೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲು ಆಗ್ರಹಿಸಿ ತಮಿಳುನಾಡಿನ 8 ಜಿಲ್ಲೆಗಳಲ್ಲಿ ಇಂದು ಬಂದ್‌ಗೆ ಕರೆ ನೀಡಲಾಗಿದೆ.
ಕಾವೇರಿ ಕೊಳ್ಳದ ರಕ್ಷಣಾ ಆಂದೋಲನ ಮತ್ತು ರೈತ ಸಂಘಗಳು ಜಂಟಿಯಾಗಿ ಬಂದ್‌ಗೆ ಕರೆ ನೀಡಿದ್ದು, ಕಾವೇರಿ ಕೊಳ್ಳದ 8ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಾಗಪಟ್ಟಣಂ ಜಿಲ್ಲೆಯೊಂದರಲ್ಲೇ ಸುಮಾರು 12000 ಅಂಗಡಿಗಳನ್ನು ಮುಚ್ಚಲಾಗಿದೆ ಎಂದು ವರದಿಯಾಗಿದೆ.
ತಮಿಳುನಾಡಿನ ತಿರುಚಿರಪಳ್ಳಿ, ತಾಂಜಾವೂರು, ನಾಗಪಟ್ಟಣಂ ಮತ್ತು ತಿರುವಾರೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಬಂದ್ ಹಮ್ಮಿಕೊಂಡಿದ್ದು, ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ತಮಿಳುನಾಡಿಗೆ ಅಗತ್ಯವಿರುವ ಕಾವೇರಿ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ತಮಿಳುನಾಡು ವಿಧಾನಸಭೆ ಸೋಮವಾರ ಅಂಗೀಕರಿಸಿತ್ತು.
ಇದನ್ನೂ ಓದಿ: ಕಮಲ “ದಳವನ್ನು” ನುಂಗುತ್ತಾ? ಜೆಡಿಎಸ್ ಶವಪೆಟ್ಟಿಗೆಗೆ ಅಂತಿಮ ಮೊಳೆ ಹೊಡೆಯಲಿದೆಯೇ ಬಿಜೆಪಿ?
ನಿರ್ಣಯ ಮಂಡಿಸಿದ್ದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕರ್ನಾಟಕ ಕೃತಕ ಬಿಕ್ಕಟ್ಟು ಸೃಷ್ಟಿಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನೀರು ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದ್ದರು.
ಸೆ 28ರಿಂದ ಅಕ್ಟೋಬರ್ 15ರವರೆಗೆ ಬಿಳಿಗುಂಡ್ಲು ಮಾಪನ ಕೇಂದ್ರಕ್ಕೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಬೀಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕ್ಕೆ ಆದೇಶಿಸಿತ್ತು. ಆದರೆ ಕರ್ನಾಟಕದಲ್ಲಿ ಭೀಕರ ಬರಗಾಲ ಇರುವುದಾಗಿ ಉಲ್ಲೇಖಿಸಿ ತಮಿಳುನಾಡಿಗೆ ನೀರು ಹರಿಸಲು ಕರ್ನಾಟಕ ಸರ್ಕಾರ ನಿರಾಕರಿಸಿತ್ತು.
ವಿಡಿಯೋ ನೋಡಿ: ರೈತ, ಕಾರ್ಮಿಕ, ದಲಿತ, ಕೂಲಿಕಾರರ, ಮಹಿಳೆಯರ ಹಕ್ಕುಗಳಿಗಾಗಿ ಮಹಾಧರಣಿ Janashakthi Media
#WATCH | Tamil Nadu: Farmers’ Union call for protest in Nagapattinam over the Cauvery water issue. pic.twitter.com/vudKNKuwCh
— ANI (@ANI) October 11, 2023